ಗದಗ: ಕ್ರೀಡಾಪಟುಗಳಿಂದ ಕಬ್ಬಡ್ಡಿ ಪಂದ್ಯಾವಳಿಗಳು: ಮತದಾನ ಕುರಿತು ಜಾಗೃತಿ
ಗದಗ 30: ಕೇಂದ್ರ ಚುನಾವಣಾ ಆಯೋಗದ ನಿದರ್ೇಶನದ ಅನ್ವಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಅಂಗವಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿಂದು(ದಿ.30)ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕರಾದ ಬಿ.ಬಿ ವಿಶ್ವನಾಥ, ಡಿ.ಎಸ್. ತಳವಾರ, ಶಿಕ್ಷಕರು ಹಾಗೂ ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಎಂ.ಎಸ್. ಕುಚಬಾಳ, ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರುಗಳು ಸಂಘಟಿಸಿದ ಈ ಪಂದ್ಯಾವಳಿಗಳಲ್ಲಿ ತಾಲೂಕಿನ ವಿವಿಧ ಕ್ರೀಡಾಪಟುಗಳು ಭಾಗವಹಿಸಿದ್ದರು. ಪಂದ್ಯಾವಳಿಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತದಾನ ಜಾಗೃತಿ ಮೂಡಿಸಿ ತಪ್ಪದೇ ಮತ ಚಲಾಯಿಸಿ ತಮ್ಮ ಅವಲಂಬಿತರಿಗೂ ಕೂಡ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲು ಕೋರಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 