ಗದಗ 10: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ದೇವರ ದಾಸಿಮಯ್ಯರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮಪರ್ಿಸಿ ಗೌರವ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿಗಳು ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಅರ್ಜುನ ಗೊಳಸಂಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.