ಗದಗ 22: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ಹುಲಕೋಟಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಸಾರ್ವಜನಿಕರಿಗೆ ಆರೋಗ್ಯ ಸೌಲಭ್ಯ ಒದಗಿಸುವ ಕುರಿತು ಇರುವ ಔಷಧ , ಮೂಲಸೌಲಭ್ಯಗಳ ಹಾಗೂ ವೈದ್ಯರು ಮತ್ತು ಸಿಬ್ಬಂದಿಯ ಲಭ್ಯತೆ ಕುರಿತು ಪರಿಶೀಲಿಸಿದರು. ತದನಂತರ ಹುಲಕೋಟಿ ಕೆ.ಎಚ್. ಪಾಟೀಲ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ಹಾಗೂ ಪಡಿತರ ವಿತರಣಾ ಕೇಂದ್ರಕ್ಕೆ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ, ಪಡಿತರ ವಿತರಣೆ ಕುರಿತಂತೆ ಪರಿಶೀಲನೆ ನಡೆಸಿದರು.