ಗದಗ: ಕರ್ನಾಟಕ ಲೋಕಸೇವಾ ಆಯೋಗದ ಸ್ಫರ್ಧಾತ್ಮಕ ಪರೀಕ್ಷೆ ಪಾರದರ್ಶಕವಾಗಿ ಜರುಗಿಸಲು ಸರ್ವ ಕ್ರಮಕೈಗೊಳ್ಳಲಿ

ಗದಗ 03: ಕರ್ನಾಟಕ  ಲೋಕಸೇವಾ ಆಯೋಗದ ವತಿಯಿಂದ ಪ್ರಥಮ ಹಾಗೂ ದ್ವೀತಿಯ ದರ್ಜೆ ಸಹಾಯಕ ನೇಮಕಾತಿಗಾಗಿ ಇದೇ ಜೂನ್ 8, 9 ಹಾಗೂ 16 ರಂದು  ಜರುಗಲಿದ್ದು ಜಿಲ್ಲೆಯಲ್ಲಿ ಪಾರದರ್ಶಕ, ಶಾಂತಿ ಹಾಗೂ ಸುವ್ಯವಸ್ಥಿತ ಪರೀಕ್ಷೆಗಳನ್ನು ನಡೆಸಲು ಸರ್ವಕ್ರಮ ಕೈಗೊಳ್ಳಲು ಗದಗ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಸೂಚಿಸಿದರು.

ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಕನರ್ಾಟಕ ಲೋಕಸೇವಾ ಆಯೋಗದ ಸ್ಪಧರ್ಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಥಮ ಹಾಗೂ ದ್ವೀತಿಯ ದಜರ್ೆ ಸಹಾಯಕರ ಹುದ್ದೆಗೆ ಕರ್ನಾಟಕ್  ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಲ್ಲಿ  ಪ್ರಥಮ ದರ್ಜೆ  ಸಹಾಯಕರ ಹುದ್ದೆಗೆ 5226, ದ್ವೀತಿಯ ದಜರ್ೆ ಸಹಾಯಕರ ಹುದ್ದೆಗೆ 8507 ಅಭ್ಯಥರ್ಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಸ್ಪಧರ್ಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ, ಪ್ರಶ್ನೆ ಪತ್ರಿಕೆ ವಿತರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು. ಪ್ರಾಚಾರ್ಯರು, ಪೋಲಿಸ ಸಿಬ್ಬಂದಿ ಹಾಗೂ ಮಾಗರ್ಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಇಲೆಕ್ಟ್ರಾನಿಕ ಉಪಕರಣಗಳ ಬಳಕೆ ನಿಷೇಧಿಸಲಾಗಿದ್ದು ಈ ಕುರಿತು ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯಥರ್ಿಗಳ ಗಮನಕ್ಕೆ ಬರುವ ಹಾಗೆ ಫಲಕಗಳನ್ನು ಅಳವಡಿಸಲು ಸೂಚಿಸಿದರು. ಪರೀಕ್ಷೆಗಳು ಜರುಗುವ ಪರೀಕ್ಷಾ ಕೇಂದ್ರದ 200 ಮೀ. ಪ್ರದೇಶವನ್ನು ಪ್ರತಿಬಂಧಕಾಜ್ಞೆಯನ್ನು ಹೊರಡಿಸಿ ಅಲ್ಲಿರುವ ಝರಾಕ್ಸ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗುತ್ತಿದ್ದು ಪ್ರತಿಬಂಧಕ ಸಮಯದಲ್ಲಿ ಝರಾಕ್ಸ ಅಂಗಡಿಗಳು ತೆರೆಯದಂತೆ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿಧ್ಯಾಥರ್ಿಗಳಿಗೆ ಯಾವುದೇ ತೊಂದರೆಗಳಾಗದಂತೆ ಅವರ ಆಸನ,  ಉತ್ತಮ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವದು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಜವಾಬ್ದಾರಿಯಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೋ ಚಿತ್ರಿಕರಣದ ವ್ಯವಸ್ಥೆ ಜೊತೆಗೆ ಪರೀಕ್ಷಾ ಕೇಂದ್ರದ ಸುತ್ತಲೂ ಅಗತ್ಯದ ಪೋಲಿಸ್ ಬಂದೋಬಸ್ತಿನೊಂದಿಗೆ ಸ್ಪಧರ್ಾತ್ಮಕ ಪರೀಕ್ಷೆಗಳನ್ನು ಯಾವುದೇ ಲೋಪಗಳಾಗದಂತೆ ಜರುಗಿಸಲು ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಎನ್.ಎಚ್.ನಾಗೂರ, ಅಕ್ಷರ ದಾಸೋಹ ಹಾಗೂ ನೋಡೆಲ್ ಅಧಿಕಾರಿ ಮಂಗಳಾ ತಾಪಸಕರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷೆ ಜರುಗುವ ಕಾಲೇಜುಗಳ ಪ್ರಾಚಾರ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.