ಗದಗ 14: ಚುನಾವಣಾ ಆಯೋಗದ ನಿದರ್ೇಶನದ ಅನ್ವಯ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತದಾರ ನೊಂದಣಿ ಹಾಗೂ ತಪ್ಪದೇ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುತ್ತಿರುವ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯಾ ಇಲಾಖೆಗಳು ಆಸಕ್ತಿ ವಹಿಸಿ ಆಯೋಜಿಸಲು ಜಿ.ಪಂ. ಸಿ.ಇ.ಓ. ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಸೂಚಿಸಿದರು.
ಗದಗ ಜಿ.ಪಂ. ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕಚೇರಿಗಳು ತಮ್ಮ ಕಚೇರಿಯಿಂದ ಕಳುಹಿಸುವ ಪತ್ರಗಳ ಮೇಲೆ ಮತದಾನ ಜಾಗೃತಿ ಘೋಷವಾಕ್ಯದ ಕೆಂಪು ಶಾಹಿಯ ಮೊಹರನ್ನು ಹಾಕಲು ಕ್ರಮ ಜರುಗಿಸಬೇಕು. ಜಿಲ್ಲೆಯ ಪ್ರತಿಯೊಂದು ಸರಕಾರಿ ಕಚೇರಿಯಲ್ಲಿ ಮತದಾರರ ಜಾಗೃತಿ ವೇದಿಕೆ ರಚಿಸಿ ಪ್ರತಿ ವಾರ ಸಭೆ ಜರುಗಿಸಿ ವರದಿ ನೀಡಬೇಕು. ಮತದಾರರ ಯಾದಿಯಲ್ಲಿ ನೋಂದಣಿಯಾಗಿರುವ ಕುರಿತು ಪರೀಶಿಲನೆ, ಸದಸ್ಯರು ಯಾವುದೇ ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡುವಂತೆ ಪ್ರೇರೆಪಿಸುವುದು ಹಾಗೂ ಸಮಿತಿಯ ಎಲ್ಲ ಸದಸ್ಯರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಪ್ರೇರೆಪಿಸಬೇಕು. ಇಲಾಖೆಗಳ ಜೊತೆ ಕಾರ್ಯ ನಿರ್ವಹಿಸುತ್ತಿರುವ ಸಕರ್ಾರೇತರ ಸಂಸ್ಥೆಗಳಲ್ಲಿಯೂ ಇಂತಹ ವೇದಿಕೆ ರಚಿಸಲು ಸ್ವೀಪ್ ಸಮಿತಿ ಅಧ್ಯಕ್ಷರು ತಿಳಿಸಿದರು. ಪ್ರತಿಯೊಬ್ಬ ಸರಕಾರಿ ಅಧಿಕಾರಿಯು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಉದಾಸೀನ ಮಾಡದೇ ಮತದಾನ ಪ್ರಕ್ರಿಯೆಯಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಜೊತೆಗೆ ಸಾರ್ವಜನಿಕರಲ್ಲೂ ಮತದಾನ ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಮಂಜುನಾಥ ಚವ್ಹಾಣ ಮನವಿ ಮಾಡಿದರು.
ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಹಾಗೂ ಜಿ.ಪಂ. ಯೋಜನಾ ನಿದರ್ೇಶಕ ಟಿ.ದಿನೇಶ ಮಾತನಾಡಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಮತ-ನಮ್ಮ ಶಕ್ತಿ ಎಂಬ ಧ್ಯೇಯ ವಾಕ್ಯದೊಂದಿಗೆ ತಯಾರಿಸಿದ ಬ್ಯಾನರಗಳನ್ನು ಜಿಲ್ಲೆಯ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳಲ್ಲಿ ಹಾಗೂ ಪ್ರತಿ ಬ್ಯಾಂಕಿನ ಶಾಖೆಗಳಲ್ಲಿ ಪ್ರದರ್ಶನಕ್ಕೆ ಕ್ರಮ ಕೈಗೊಳ್ಳಬೇಕು. ರಾಜ್ಯ ಚುನಾವಣಾ ಆಯೋಗವು ಮತದಾರರಲ್ಲಿ ಜಾಗೃತಿ ಮೂಡಿಸುವ ಗೀತಚಿತ್ರ ನಿಮರ್ಿಸಿದ್ದು ಇದನ್ನು ಗದಗ ಜಿಲ್ಲೆಯ ಎಲ್ಲ ಬ್ಯಾಂಕ, ರೈಲು ನಿಲ್ದಾಣ, ಬಸನಿಲ್ದಾಣ ಹಾಗೂ ಕಚೇರಿಗಳಲ್ಲಿ ಪ್ರದಶರ್ಿಸಲು ಕ್ರಮ ಜರುಗಿಸಲು ತಿಳಿಸಿದರು.
ಜಿಲ್ಲಾ ಸ್ವೀಪ ಸಮಿತಿಯ ಸದಸ್ಯರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲ ತಾ.ಪಂ.ಗಳ ಕಾರ್ಯನಿವರ್ಾಹಕ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.