ಗದಗ 18: 2019 ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನಲೆಯಲ್ಲಿ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯ ಸಹಯೋಗದಲ್ಲಿ ಏ.17 ರಂದು ನಗರದ ವಿಡಿಎಸ್ಟಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಗದಗ ನಗರಸಭೆಯು ಪ್ರಥಮ ಸ್ಥಾನ ಪಡೆದರೆ, ಜಿಲ್ಲಾ ಸ್ವೀಪ್ ಸಮಿತಿಯು ದ್ವಿತಿಯ ಸ್ಥಾನವನ್ನು ಪಡೆಯಿತು. ಗೆದ್ದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಜಿ.ಪಂ ಮುಖ್ಯಕಾರ್ಯನಿವರ್ಾಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟ.ದಿನೇಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಂಬಾಳಿಮಠ ಇತರರು ಪಂದ್ಯಾವಳಿಯಲಿ ಭಾಗವಹಿಸಿದ್ದರು.