ಗದಗ 16: 2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಎಪ್ರಿಲ್ 23ರಂದು ಮತದಾನ ನಡೆಯಲಿರುವ ಹಿನ್ನಲೆಯಲ್ಲಿ ನರಗುಂದದ ಬಸವೇಶ್ವರ ಸಭಾಭವನದಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದ ಚುನಾವಣಾ ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಗದಗ ಜಿಲ್ಲಾ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿದರು.
ಬಾಗಲಕೋಟಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಗದಗ ಜಿಲ್ಲೆಯ ನರಗುಂದ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಚುನಾವಣಾ ಆಯೋಗದ ನಿದರ್ೇಶನದಂತೆ ಪ್ರತಿಯೊಂದು ಕಾರ್ಯವನ್ನು ನಿಗದಿತ ಅವಧಿಯಲ್ಲಿ ದಕ್ಷತೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನುಡಿದರು. ಮತಗಟ್ಟೆಯಲ್ಲಿ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿ ತಮಗೆ ವಹಿಸಿದ ಕಾರ್ಯವನ್ನು ಚಾಚೂ ತಪ್ಪದೇ ನಿರ್ವಹಿಸಬೇಕು. ಮತದಾನ ಕಾರ್ಯ ಯಾವುದೇ ಗೊಂದಲವಿಲ್ಲದೇ ಶಾಂತಿ ಸುವ್ಯವಸ್ಥೆಯಿಂದ ನಡೆಯಲು ತಾವು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವುದು ಅವಶ್ಯವಾಗಿದೆ. ಒಟ್ಟಾರೆಯಾಗಿ ಚುನಾವಣಾ ವ್ಯವಸ್ಥೆಯ ಸಂಬಂಧಿತ ತಂಡಗಳೊಂದಿಗೆ, ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮತದಾನವು ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಂತೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ತರಬೇತಿ ಸಂಪನ್ಮೂಲ ವ್ಯಕ್ತಿಗಳು, ಸೆಕ್ಟರ್ ಅಧಿಕಾರಿಗಳು, ನರಗುಂದ ತಹಶೀಲ್ದಾರ ಯಲ್ಲಪ್ಪ ಗೊಣ್ಣೆಣ್ಣವರ್, ನರಗುಂದ ವಿದಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸದಾಶಿವ ಮಜರ್ಿ ಹಾಗೂ ಇತರರು ಉಪಸ್ಥಿತರಿದ್ದರು.