ಗದಗ 27: ಪ್ರಜಾಪ್ರಭುತ್ವ ಬಲಗೊಳ್ಳುವಲ್ಲಿ ಮತದಾನದ ಪಾತ್ರ ಬಹು ಮುಖ್ಯವಾಗಿದ್ದು ಎಪ್ರಿಲ್ 23ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಯುವ ಜನರು ಸೇರಿದಂತೆ ಎಲ್ಲ ಅರ್ಹ ಮತದಾರರು ಪಾಲ್ಗೊಳ್ಳಬೇಕೆಂದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನುಡಿದರು.
ನಗರದ ವಿವೇಕಾನಂದ ಸಭಾಂಗಣದಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಗದಗ ಜಿಲ್ಲೆಯ ಎನ್.ಎಸ್.ಎಸ್. ಘಟಕಗಳು ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಯುವ ಮತದಾರರ ಜಾಗೃತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಎಲ್ಲ ಅರ್ಹ ಮತದಾರರು ಯಾವುದೇ ಅಮಿಷಕ್ಕೊಳಗಾಗದೇ ನಿರ್ಭಿತರಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಗದಗ ಜಿ.ಪಂ. ಸಿ.ಇ.ಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ಅವರು ಮಾತನಾಡಿ ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಯುವ ಮತದಾರರ ನೊಂದಣಿ ಹಾಗೂ ಮತದಾರ ಜಾಗೃತಿ ಕಾರ್ಯಗಳನ್ನು ಜರುಗಿಸಲಾಗಿದೆ. ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ಚುನಾವಣಾ ಅಕ್ರಮಗಳು ಕಂಡು ಬಂದರೆ ಅ-ತರಟ ಆ್ಯಪ್ ಮೂಲಕ ಸಹಾಯಕ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ದೂರವಾಣಿ ಸಂಖ್ಯೆ 1950 ಗೆ ಕರೆ ಮಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿಕೊಳ್ಳಬಹುದು ಹಾಗೂ ಏಂಇಕಅ (ಖಕಂಅಇ) ಕೊಟ್ಟು ತಮ್ಮ ಇಕಅ ಕಾರ್ಡನಲ್ಲಿ ನಮೂದಿಸಿರುವ 10 ಅಂಕೆಗಳನ್ನು ಟೈಪ್ ಮಾಡಿ ತಮ್ಮ ಸಂಪೂರ್ಣ ಮಾಹಿತಿಯನ್ನು 9731979899 ಗೆ ಕಳುಹಿಸುವದರ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರನ್ನು ಪರಿಶೀಲಿಸಿಕೊಳ್ಳಬಹುದು ಎಂದು ಮಂಜುನಾಥ ಚವ್ಹಾಣ ತಿಳಿಸಿದರು.
ನಿವೃತ್ತ ನ್ಯಾಯಮೂತರ್ಿ ಅರಳಿ ನಾಗರಾಜ ಅವರು ಮಾತನಾಡಿ ದೇಶದ ಸುಭದ್ರ ಆಡಳಿತಕ್ಕೆ ಮತದಾನವು ಪ್ರಮುಖ ಪಾತ್ರ ವಹಿಸುತ್ತದೆ. ಮತದಾನವು ಹಕ್ಕು ಮತ್ತು ಕರ್ತವ್ಯವಾಗಿದ್ದು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ನ್ಯಾಯಾಧೀಶ ಎಸ್.ಜಿ. ಪಲ್ಲೇದ, ಗದಗ ಜಿಲ್ಲಾ ಎನ್.ಎಸ್.ಎಸ್. ನೋಡಲ್ ಅಧಿಕಾರಿ ವಿ.ಎಚ್.ಕೊಳ್ಳಿ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ವಿಶ್ವನಾಥ, ಕಾಲೇಜಿನ ಪ್ರಾಚಾರ್ಯರುಗಳು, ಅಧ್ಯಾಪಕರು, ವಿದ್ಯಾರ್ಥಿಗಳು , ಎನ್.ಎಸ್. ಎಸ್. ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗದಗ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದರ್ಶಿ ಟಿ. ದಿನೇಶ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು ಹಾಗೂ ಸ್ವಾಗತಿಸಿದರು. ಬಾಹುಬಲಿ ಜೈನರ ಕಾರ್ಯಕ್ರಮ ನಿರೂಪಿಸಿದರು.