ಗದಗ: ಮತದಾರರ ಜಾಗೃತಿಗೆ ತ್ರಿ ಚಕ್ರ ವಾಹನ ಜಾಥಾ ಜಾಗೃತಿ ಕಾರ್ಯಕ್ರಮ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿಕೆ

ಗದಗ 26: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಎಲ್ಲ ಮತದಾರರು ತಪ್ಪದೇ ಮತದಾನ ಮಾಡುವಂತೆ ಪ್ರೇರೇಪಿಸಲು ವಿಕಲಚೇತನರಿಂದ ತ್ರಿ ಚಕ್ರ ವಾಹನ ಜಾಥಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನುಡಿದರು.

ಲೋಕ ಸಭಾ ಸಾರ್ವತ್ರಿಕ ಚುನಾವಣೆ-2019ರ  ಪ್ರಯುಕ್ತ ತಪ್ಪದೇ ಮತದಾನ ಮಾಡುವಂತೆ ಜಾಗೃತಿಗಾಗಿ ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ವಿಕಲಚೇತನರ ತ್ರಿ ಚಕ್ರ ವಾಹನ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಜನಪ್ರತಿನಿಧಿ ಆಯ್ಕೆ, ಪ್ರಜಾಪ್ರಭುತ್ವವನ್ನು ಬಲಗೊಳಿಸಬೇಕು ಎಂಬ ಆಶಯದೊಂದಿಗೆ ಜಿಲ್ಲಾ ಸ್ವೀಪ್ ಸಮಿತಿಯು ಹಲವಾರು ವಿಧದ ಮತದಾರ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದ್ದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಈ ವಿಶೇಷ ಕಾರ್ಯಕ್ರಮ ಏರ್ಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ನುಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದಶರ್ಿ ಪ್ರಾಣೇಶರಾವ್, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ. ದಿನೇಶ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.