ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವೋಟ್ ಚೋರಿ ಸಮಾವೇಶದ ಕುರಿತು ಪೂರ್ವಭಾವಿ ಸಭೆ
Gadag District Congress Committee holds preliminary meeting on vote theft convention
ಗದಗ 02: 2026ನೇ ಸಾಲಿನ ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ ಹಾಗೂ ದೆಹಲಿಯ ರಾಮಲೀಲಾ ಮೈದಾನದಲ್ಲಿ ಜರುಗಲಿರುವ ಬೃಹತ್ ವೋಟ್ ಚೋರಿ ಸಮಾವೇಶದ ಕುರಿತು ನಗರದ ದಿ. ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 04-12-2025ರಂದು ಮಧ್ಯಾಹ್ನ 12ಕ್ಕೆ ಪೂರ್ವಭಾವಿ ಸಭೆ ಜರುಗಲಿದೆ. ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸುವರು. ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ, ವೀಕ್ಷಕರಾದ ಎಸ್.ಜಿ. ನಂಜಯ್ಯನಮಠ, ವಿಧಾನ ಪರಿಷತ್ ಸದಸ್ಯರಾದ ಎಫ್.ಎಚ್. ಜಕ್ಕಪ್ಪನವರ, ಮೋಹನ್ ಅಸುಂಡಿ, ಎಂ.ಬಿ. ಸೌದಾಗಾರ ಭಾಗವಹಿಸುವರು.
ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಆಕಾಂಕ್ಷಿಗಳು ಉಪಸ್ಥಿತರಿರುತ್ತಾರೆ.ಕಾರಣ ಗದಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಗದಗ ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಗದಗ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸದರಿ ಸಭೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಗದಗ ಬ್ಲಾಕ್ ಅಧ್ಯಕ್ಷರಾದ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 