ಗದಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅನಿಲ (ಸಿಲಿಂಡರ್) ದರ ಏರಿಕೆ
Gadag District Congress proposes increase in gas (cylinder) prices
ಗದಗ 11 : ಅನಿಲ (ಸಿಲಿಂಡರ್) ದರ ಏರಿಕೆ ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚ್ 12ರಂದು ಸಂಜೆ 4ಕ್ಕೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಅವರು ಪ್ರತಿಭಟನೆಯ ನೇತೃತ್ವ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ,
ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು.ಕಾರಣ ಈ ಕಾರ್ಯಕ್ರಮಕ್ಕೆ ಯಾವತ್ತು ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪಧಾದಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್,
ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ,
ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ, ಗದಗ-ಬೆಟಗೇರಿ ಶಹರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ.ಬಿ. ಅಸೂಟಿ ಹಾಗೂ ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 