ಗದಗ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ನಾಟಕಕಾರ ಗಿರೀಶ ಕಾನರ್ಾಡ್ ಅವರ ನಿಧನದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಅವರಿಗೆ ಗೌರವ ಅರ್ಪಿಸಿ ಸಭೆಯನ್ನು ಮುಂದೂಡಲಾಯಿತು. ಗಿರೀಶ ಕಾರ್ನಾಡ ಅವರ ಆತ್ಮಕ್ಕೆ ಶಾಂತಿ ಕೋರಿ ಸಭೆಯು ಮೌನವನ್ನು ಆಚರಿಸಿ ಗೌರವ ಅರ್ಪಿಸಿತು . ಗದಗ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಪಿ. ಬಳಿಗಾರ, ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಪ್ರಾಣೇಶ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.