ಅಳವಂಡಿಯಲ್ಲಿ ಗೈರವಿ ಶರೀಫ್ ಹಬ್ಬ: ಧಾರ್ಮಿಕ-ಸಂಸ್ಕೃತಿ ಕಾರ್ಯಕ್ರಮ
Gairavi Sharif Festival in Alavandi: Religious and Cultural Programme
ಕೊಪ್ಪಳ, ಸೆ.24: ತಾಲೂಕಿನ ಅಳವಂಡಿ ಗ್ರಾಮದ ಹಜರತ್ ಸೈಯದ್ ಮಹಬೂಬ್ ಸುಭಾನಿ (ಗೌಸ್-ಎ-ಪಾಕ್) ಅವರ ಗೈರವಿ ಶರೀಫ್ ಹಬ್ಬದ ಅಂಗವಾಗಿ ಅಳವಂಡಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಧಾರ್ಮಿಕ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಬ್ಯಾಗ್ ವಿತರಣೆ ಮತ್ತು ಧಾರ್ಮಿಕ-ಸಂಸ್ಕೃತಿ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಕಾರ್ಯಕ್ರಮವು ಸೆ.25ರಂದು ಶುಕ್ರವಾರ ಸಂಜೆ 4 ಗಂಟೆಗೆ ಅಳವಂಡಿಯ ಹಜರತ್ ಮಹಬೂಬ್ ಸುಭಾನಿ ದರ್ಗಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಹಿರೇಮಠ ಅಳವಂಡಿಯ ಶ್ರೀ ಸಿದ್ದೇಶ್ವರ ಮಹಾಸಂಸ್ಥಾನದ ಶ್ರೀ ಷ.ಬ್ರ.108 ಶ್ರೀ ಮರುಳಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಬೆಳಗಟ್ಟಿ ಶರೀಫ್ನ ಸಜ್ಜಾದೆ ನಶೀನ್ ಮುಫ್ತಿ ಸೈಯದ್ ಶಾ ಮುಸ್ತಫಾ ಖಾದ್ರಿ ಉರ್ಫ್ ಅನ್ವರ್ ಖಾದ್ರಿ ವಹಿಸಲಿದ್ದಾರೆ.
ಮದರಸಾ ಎಜುಕೇಷನ್ ಚಾರಿಟಿಯ ನಿರ್ದೇಶಕರು ಹಾಗೂ ಎಸ್ಎಸ್ಎಫ್ ರಾಜ್ಯಾಧ್ಯಕ್ಷ ಹಫೀಜ್ ಸುಫ್ಯಾನ್ ಸಖಾಫಿ ಅಲ್ ಹಿಕಾಮಿ ಅವರು ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಹಾಗೂ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ್ ಕಾರ್ಯಕ್ರಮವನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಅನ್ವರ್ ಹುಸೇನ್ ಗಡಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 