ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಲೋಕದರ್ಶನ ವರದಿ
ಶಿಗ್ಗಾವಿ09; ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಒದಗಿಸುವ ಅವಕಾಶ ಕಲ್ಪಿಸುವ ಸಲುವಾಗಿ ಅವರಿಗೆ ಎರಡು ದಿನ ತರಬೇತಿ ನೀಡಿ ಮೂರನೇ ದಿನ ವಿವಿಧ ಕಂಪನಿಗಳಿಂದ ಉದ್ಯೋಗ ಒದಗಿಸಲು ಪಟ್ಟಣದಲ್ಲಿ ನಮ್ಮ ಟ್ರಷ್ಟ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪಟ್ಟಣದ ಸವಣೂರ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ನೋಂದಣಿ ಕಾರ್ಯ ಪ್ರಾರಂಭವಾಗಿದ್ದು ಆಸಕ್ತ ಅಭ್ಯಥರ್ಿಗಳು ಇದೇ ನ. 14 ರ ಕೊನೆಯ ದಿನದ ಒಳಗಾಗಿ ತಮ್ಮ ಹೆಸರನ್ನು ನೊಂದಣಿ ಮಾಡಿಸಬೇಕು ಮತ್ತು ಮಿಸ್ಡ್ ಕಾಲ್ ಮಾಡುವ ಮೂಲಕ ಮೊ 9071870623 ಗೆ ನೊಂದಣಿ ಮಾಡಬಹುದು.
ದಿ. 14 ಮತ್ತು 15 ರಂದು ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ನೀಡಲಾಗುವದು ಮತ್ತು 16 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಯೋಗ ಮೇಳದಲ್ಲಿ ಗಾಮರ್ೆಂಟ್ಸ್ ಉದ್ಯೋಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ, ಯುವಕರಿಗೆ ಐಟಿ ಬಿಟಿ ಸೇರಲು, ಟೇಲರ್ ಸೆಕ್ಟರ, ಟೂಲ್ಸ್ ಸೆಂಡ್ ಇದರಲ್ಲಿ ಬರುತ್ತದೆ.
ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಪ್ರಭಂಜನ, ವಿಆರ್ಎಲ್, ಹಿಮ್ಮತ್ ಸಿಂಕಾ, ಬಿಗ್ ಬಜಾರ, ರಿಲಾಯಿನ್ಸ್ ಹಾಗೂ ಯುರೇಖಾ ಫೋರ್ಸ್ ಸೇರಿದಂತೆ ಮುಂತಾದ ಕಂಪನಿಗಳು ಭಾಗವಹಿಸುತ್ತವೆ.
ಎಸ್.ಎಸ್.ಎಲ್.ಸಿ ಯಿಂದ ಪದವಿ ವರೆಗಿನವರಿಗೆ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ, ನಾನ್ ಐಟಿಐ ವಿದ್ಯಾಥರ್ಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ವಿದ್ಯಾಹತರ್ೆಗೆ ಅನುಕೂಲವಾದ ಉದ್ಯೋಗ ಹಾಗೂ ಬಡವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗುವದು, ನಮ್ಮ ಟ್ರಸ್ಟ ಉದ್ಯೋಗಿಗಳಿಗೆ ಮತ್ತು ಕಂಪನಿಯವರಿಗೆ ವೇದಿಕೆ ಕಲ್ಪಿಸಿಕೊಡುವದು ಅರ್ಹತೆ ಆಧಾರದ ಮೇಲೆ ಉದ್ಯೋಗ ಪಡೆಯಬೇಕು ಇಲ್ಲಿ ಟ್ರಸ್ಟ ವಯಕ್ತಿಕವಾಗಿ ಯಾರ ಜವಾಬ್ದಾರಿಯನ್ನು ಸಂಸ್ಥೆ ತೆಗೆದುಕೊಳ್ಳುವದಿಲ್ಲ ಆದರಿಂದ ತಾಲೂಕಿನ ಯುವಕ ಯುವತಿಯರು ಈ ಸುವಣರ್ಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 