ಗಾಟಿನ ದೊಡ್ಡ ಈರಣ್ಣ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಗಾಟಿನ ದೊಡ್ಡ ಈರಣ್ಣ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ Gatina Dodda Eranna gets Taluk level best teacher award

ಬಳ್ಳಾರಿ 17:  ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೆ.ಸಿ. ಕಾಲೋನಿ, ಬಳ್ಳಾರಿ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಗಾಟಿನ ದೊಡ್ಡ ಈರಣ್ಣ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಶ್ರೀ ಗಾಟಿನ ದೊಡ್ಡ ಈರಣ್ಣ ಅವರು ಶಿಕ್ಷಣ ಇಲಾಖೆಯ ಶೈಕ್ಷಣಿಕ ಕಾರ್ಯಗಳನ್ನು ಅತ್ಯಂತ ಕರ್ತವ್ಯ ನಿಷ್ಠೆಯಿಂದ, ಪ್ರಾಮಾಣಿಕತೆ ಹಾಗೂ ಸಹಕಾರ ಮನೋಭಾವದಿಂದ ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಶಾಲಾ ಚಟುವಟಿಕೆಗಳು, ಶೈಕ್ಷಣಿಕ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಅವರು ಸಕ್ರಿಯ ಪಾತ್ರವಹಿಸಿದ್ದಾರೆ.ಇವರ ಶೈಕ್ಷಣಿಕ ಸಾಧನೆ, ಸೇವಾ ನಿಷ್ಠೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯ ವತಿಯಿಂದ ಈ ಗೌರವಾನ್ವಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಈ ಪ್ರಶಸ್ತಿ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಹರ್ಷವನ್ನು ಮೂಡಿಸಿದೆ.ಶಿಕ್ಷಣ ಪ್ರೇಮಿಗಳು, ಸಹ ಶಿಕ್ಷಕರು ಹಾಗೂ ಸಾರ್ವಜನಿಕರು ಗಾಟಿನ ದೊಡ್ಡ ಈರಣ್ಣ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ರಮೇಶ್ ಇಬ್ರಾಂಪುರ ರವರು ತಿಳಿಸಿದರು.