ಧಾರವಾಡ19: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಹಾಗೂ ಪ್ರಚಾರದಲ್ಲಿ ಬಳಸುವ ವಿವಿಧ ಪರಿಕರ, ಸೇವೆಗಳ ಪ್ರಸ್ತುತ ಮಾರುಕಟ್ಟೆ ದರಗಳ ಕುರಿತು ನೋಂದಾಯಿತ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ಜರುಗಿಸಿ, ಮಾಹಿತಿ ನೀಡಿದರು.
ಸಾರ್ವತ್ರಿಕ ಚುನಾವಣೆ ಶಾಂತಿಯುತವಾಗಿ, ನ್ಯಾಯಸಮ್ಮತವಾಗಿ ನಡೆಯಲು ರಾಜಕೀಯ ಪಕ್ಷಗಳ ಸಹಕಾರವು ಬೇಕು.
ಭಾರತ ಚುನಾವಣಾ ಆಯೋಗ ಚುನಾವಣೆಗಳ ಸಂದರ್ಭದಲ್ಲಿ ಪಕ್ಷ ಮತ್ತು ಅಭ್ಯಥರ್ಿಗಳು ಪಾಲಿಸಬೇಕಾದ ನಿಯಮ ನಿದರ್ೇಶನಗಳನ್ನು ಈಗಾಗಲೇ ನೀಡಿದೆ.
ನೀತಿಸಂಹಿತೆ ಉಲ್ಲಂಘನೆಯಾಗದಂತೆ ಜಾಗೃತಿ ವಹಿಸುವುದು ಮತ್ತು ಆಯೋಗದ ನಿದರ್ೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಮಾಡಲು ಅನುಕೂಲವಾಗುವಂತೆ ರಾಜಕೀಯ ಪಕ್ಷದ ಪ್ರತಿನಿಧಿಗಳು ತಮ್ಮ ಅಭ್ಯಥರ್ಿ, ಕಾರ್ಯಕರ್ತರಿಗೆ ಮಾಹಿತಿ ನೀಡಬೇಕು.
ಚುನಾವಣೆ ಪ್ರಚಾರ ಸಂದರ್ಭದಲ್ಲಿ ಬಳಸುವ ಪರಿಕರ, ಆನಲೈನ್ ಸೇವೆ, ಮಾದ್ಯಮ ಜಾಹೀರಾತು ಸೇರಿದಂತೆ ಅಗತ್ಯವೆನಿಸಬಹುದಾದ ವಿವಿಧ ವಸ್ತು, ಸೇವೆಗಳ ಪ್ರಸ್ತುತ ಮಾರುಕಟ್ಟೆ ದರಪಟ್ಟಿಯನ್ನು ತಮಗೆ ನೀಡಲಾಗಿದೆ.
ಗುರುವಾರ ಬೆಳಿಗ್ಗೆ ಕಚೇರಿ ಸಮಯದಲ್ಲಿ ದರಪಟ್ಟಿಗೆ ಸಂಬಂಧಿತ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಪ್ರತಿಯೋಬ್ಬರು ಚುನಾವಣಾ ಆಯೋಗದ ನಿದರ್ೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದ ಅವರು ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷ, ಅಭ್ಯಥರ್ಿಗಳು ಪಾಲಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷತೆ ಮೂಲಕ ಪ್ರತಿನಿಧಿಗಳಿಗೆ ವಿವರಿಸಿದರು.
ಮಾದರಿ ನೀತಿ ಸಂಹಿತೆ ನೊಡಲ್ ಅಧಿಕಾರಿಯಾಗಿರುವ ಜಿಲ್ಲಾ ಪಂಚಾಯತ ಸಿ.ಇ.ಓ ಡಾ.ಬಿ.ಸಿ.ಸತೀಶ್ ಅವರು ಮಾದರಿ ನೀತಿ ಸಂಹಿತೆ ಪಾಲನೆ ಬಗ್ಗೆ ಪಕ್ಷಗಳ ಪ್ರತಿನಿಧಿಗಳಿಗೆ ವಿವರಿಸಿದರು.
ಸಭೆಯಲ್ಲಿ ಅಕೌಂಟ್ಸ ಕಮಿಟಿ ನೊಡಲ್ ಅಧಿಕಾರಿ, ಆರ್.ಟಿ.ಓ ರವೀಂದ್ರ ಕವಳಿ, ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಪಾಲಿಕೆ ಉಪಆಯುಕ್ತ ಅಜೀಜ್ ದೇಸಾಯಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವಿಭಾಗದ ಸಿಬ್ಬಂದಿ, ಬಿಜೆಪಿ, ಕಾಂಗ್ರೆಸ್, ಸಮಾಜವಾದಿ, ಬಹುಜನ ಸಮಾಜ, ಜೆ.ಡಿ.ಎಸ್ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು