ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಿ
Get a good education and achieve success.
ಗದಗ 14 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗದಗ, ಜಿಲ್ಲಾ ನ್ಯಾಯವಾದಿಗಳ ಸಂಘ, ಗದಗ, ಮಂಜು ಶಿಕ್ಷಣ ಸಂಸ್ಥೆ, ಬೆಟಗೇರಿ-ಗದಗ ಸಂಯುಕ್ತಾಶ್ರಯದಲ್ಲಿ ಮಂಜು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸಿ.ಎಸ್.ಶಿವನಗೌಡ್ರ ಉದ್ಘಾಟಿಸಿ ಮಾತನಾಡಿ ಇಂದಿನ ಮಕ್ಕಳೇ ದೇಶದ ಭವಿಷ್ಯವಾಗಿದ್ದು ವಿದ್ಯಾರ್ಥಿಗಳೆಲ್ಲಾ ಚೆನ್ನಾಗಿ ಅಭ್ಯಾಸ ಮಾಡಿ, ದೇಶದ ಒಳ್ಳೆಯ ನಾಗರಿಕರಾಗಿ ಬೆಳೆಯಬೇಕು. ಸರ್ಕಾರ ಉಚಿತವಾಗಿ ಶಿಕ್ಷಣ ಸೇರಿದಂತೆ ಹಲವು ಸೌಲಭ್ಯ ನೀಡುತ್ತಿದ್ದು, ಇದರ ಪ್ರಯೋಜನ ಪಡೆದು ಸಾಧನೆಯ ಹಾದಿಯಲ್ಲಿ ನಡೆಯಬೇಕು ಎಂದು ಕರೆ ನೀಡಿದರು.
ಮಂಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷತೆ ವಹಿಸಿದ ಶಂಕರಸಿಂಗ್ ಎಸ್ ರಜಪೂತ, ಅತಿಥಿಗಳಾಗಿ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ, ಶ್ರೀಮತಿ ಸುವರ್ಣಾ ಅಕ್ಕಿ, ಪ್ಯಾನಲ್ ವಕೀಲರು, ಗದಗ, ವಿರೇಂದ್ರಸಿಂಗ್ ರಜಪೂತ, ವಿನಾಯಕಸಿಂಗ್ ರಜಪೂತ ಸೇರಿದಂತೆ ಎಲ್ಲಾ ಸಿಬ್ಬಂದಿ ಹಾಗೂ ಮಂಜು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 