ಫ್ಲೋರೈಡ್ ಅಂಶ ಕಂಡುಬರುವ ನೀರನ್ನು ಪರೀಕ್ಷೆಗೆ ಒಳಪಡಿಸಿ - ಜಿ.ಪಂ ಸಿಇಓ
Get water tested for fluoride - GP CEO
ಫ್ಲೋರೈಡ್ ಅಂಶ ಕಂಡುಬರುವ ನೀರನ್ನು ಪರೀಕ್ಷೆಗೆ ಒಳಪಡಿಸಿ - ಜಿ.ಪಂ ಸಿಇಓ
ಕೊಪ್ಪಳ 04: ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿ ಕಂಡುಬರುವ ಪ್ರತಿ ಗ್ರಾಮಗಳ ನೀರಿನ ಮೂಲಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಕಂಡುಬರುವ ಹಳ್ಳಿಗಳ ಕುರಿತು ತಾಲ್ಲೂಕುವಾರು ಮಾಹಿತಿಯನ್ನು ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ಮಾತನಾಡಿ, ಕುಡಿಯುವ ನೀರು, ಆಹಾರ, ಕೆಲವು ಓಷಧಿಗಳ ಸೇವನೆ ಹಾಗೂ ಕಾರ್ಖಾನೆಗಳಿಂದ ಹೊರಹೊಮ್ಮುವ ಧೂಳು, ಹೊಗೆ ಮುಂತಾದವುಗಳಿಂದ ಫ್ಲೋರೈಡ್ ದೇಹದೊಳಗೆ ಪ್ರವೇಶಿಸುತ್ತದೆ. ಇದು ವಯಸ್ಸಿನ ಅಂತರ, ಲಿಂಗಬೇಧವಿಲ್ಲದೆ ಚಿಕ್ಕಮಕ್ಕಳು, ವಯಸ್ಕರು, ಮಹಿಳೆಯರು, ಪುರುಷರು ಎಲ್ಲರಲ್ಲಿಯೂ ಕಂಡುಬರುತ್ತದೆ. ಇದರಲ್ಲಿ ದಂತ ಫ್ಲೋರೋಸಿಸ್, ಮೂಳೆ ಫ್ಲೋರೋಸಿಸ್ ಹಾಗೂ ದೇಹದ ಇತರೆ ಭಾಗದ ಫ್ಲೋರೋಸಿಸ್ ಎಂದು ಮೂರು ವಿಧಗಳಿವೆ. ಇದು ಮುಖ್ಯವಾಗಿ ಅಂತರ್ಜಲ, ಹಾಲಿಲ್ಲದ ಕಪ್ಪು ಟೀ, ಕಪ್ಪು ಕಲ್ಲುಪ್ಪು, ಅಡಿಕೆ, ತಂಬಾಕು ಸೇವನೆಯಿಂದ, ಡಬ್ಬದಲ್ಲಿನ ತಿಂಡಿ ತಿನಿಸುಗಳು, ಓಷಧಿಗಳು, ಸೋಡಿಯಂ ಫ್ಲೋರೈಡ್ ಮಾತ್ರೆ, ಮಂಪರು ಓಷಧಿಗಳು, ಆಹಾರದಲ್ಲಿ ಫ್ಲೋರೈಡ್ ಅಂಶ ಹೆಚ್ಚಾಗಿದ್ದರೆ, ಸಮತೋಲನ ಆಹಾರ ಸೇವಿಸದಿದ್ದರೆ ಫ್ಲೋರೋಸಿಸ್ ಖಾಯಿಲೆ ಉಂಟಾಗುತ್ತದೆ. ಇದು ಒಂದು ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪ್ರಾಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವಿಂದ್ರನಾಥ ಎಂ.ಹೆಚ್., ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರಾದ ಡಾ. ಶ್ರೀಧರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಗೋನಾಳ ಕುಮಾರಸ್ವಾಮಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶೀಧರ ಎ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಹೆಚ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್ ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ತಜ್ಞವೈದ್ಯರು ಹಾಗೂ ಇತರೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 