ರುದ್ರ್ಪ ಲಮಾಣಿಗೆ ಸಚಿವ ಸ್ಥಾನ ನೀಡಿ : ಕುಮಾರ ರಾಠೋಡ
Give Rudrapa Lamani a ministerial berth: Kumar Rathod
ದೇವರಹಿಪ್ಪರಗಿ 12 : ಬಂಜಾರ ಸಮಾಜದ ಹಾಗೂ ಹಾವೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ರುದ್ರ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಮೂಲಕ ಬಂಜಾರ ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸಬೇಕು’ ಎಂದು ಬಂಜಾರ ಸಮಾಜದ ಯುವ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸದಸ್ಯರಾದ ಕುಮಾರ ರಾಠೋಡ ಕಾಂಗ್ರೆಸ್ ಹೈಕಮಾಂಡ್ಗೆ ಮನವಿ ಮಾಡಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಂಜಾರ ಸಮಾಜ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಸಮಾಜದ ಏಕೈಕ ಶಾಸಕ ರುದ್ರ್ಪ ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು, ಶಾಸಕರಾಗಿ ಉತ್ತಮ ಕೆಲಸ ಮಾಡಿರುವ ಅವರು ಜನಪರ ಯೋಜನೆಗಳನ್ನು ಜಾರಿಗೆ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಸಚಿವ ಸ್ಥಾನ ನೀಡಬೇಕೆಂದು ಅವರು ಒತ್ತಾಯಿಸಿದರು. ಸಂದರ್ಭದಲ್ಲಿ ಬಂಜಾರ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 