ಕೊಪ್ಪಳ 25: ಅತಿಸಾರ ಭೆೇದಿಯಿಂದ ಬಳಲುತ್ತಿರುವ ಎಲ್ಲಾ ಮಕ್ಕಳಿಗೂ ಓ.ಆ.ರ್.ಎಸ್ ಮತ್ತು ಜಿಂಕ್ ಮಾತ್ರೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಾಲಚಂದ್ರರವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಜರುಗಿತ ಜಿಲ್ಲಾ ಮಟ್ಟದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
05 ವರ್ಷದೊಳಗಿನ ಅತಿಸಾರ ಭೇದಿಯಿಂದ ಬಳಲುವ ಎಲ್ಲಾ ಮಕ್ಕಳಿಗೂ ಓ.ಆ.ರ್.ಎಸ್ ಮತ್ತು ಜಿಂಕ್ ಮಾತ್ರೆ ನೀಡುವ ಮುನ್ನ ಎಲ್ಲಾ ಕುಟುಂಬಗಳ ಸಮೀಕ್ಷೆ ಮಾಡಿ ಅತಿಸಾರ ಬೇದಿಯಿಂದ ಬಳಲುತ್ತಿರುವ ಮಕ್ಕಳಿಗೆ ಮಾತ್ರೆಯನ್ನು ನೀಡಿ. ಅಲ್ಲದೇ ಎಲ್ಲಾ ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಕೈತೊಳೆಯುವ ವಿಧಾನಗಳ ಬಗ್ಗೆ ಆಹಾರ ಸ್ವಚ್ಛತೆ ಬಗ್ಗೆ ಕರ ಪತ್ರ, ಪೋಸ್ಟರ್ಸಗಳನ್ನು ಸಾರ್ವಜನಿಕರಿಗೆ ವಿತರಿಸಿ ಈ ಕುರಿತು ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಬಾಲಚಂದ್ರ ತಿಳಿಸಿದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಲಿಂಗರಾಜರವರು ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ದಿನಾಂಕ: ಜೂನ್. 03 ರಿಂದ 17 ರವರೆಗೆ ``ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ'' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಡಿಯಲ್ಲಿ 0 ದಿಂದ 05 ವರ್ಷದೊಳಗಿನ ಅತಿಸಾರ ಭೇದಿಯಿಂದ ಆಗುವ ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಆಶಾ ಕಾರ್ಯಕತರ್ೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕತರ್ೆಯರು, ಮನೆ ಮನೆಗೆ ಭೇಟಿ ನೀಡಿ ಓ.ಆರ್.ಎಸ್ & ಜಿಂಕ್ ಮಾತ್ರೆಯನ್ನು ನೀಡುವರು. ಜಿಲ್ಲೆಯಲ್ಲಿ 0 ದಿಂದ 05 ವರ್ಷದೊಳಗಿನ ಮಕ್ಕಳ 1,84,140 ಗುರಿ ಹೊಂದಿದ್ದು, ಅತಿಸಾರ ಬೇದಿಯಿಂದ ಬಳಲುವ ಮಕ್ಕಳಿಗೆ ಓ.ಆರ್.ಎಸ್ & ಜಿಂಕ್ ಮಾತ್ರೆ ಸೌಲಭ್ಯವನ್ನು ನೀಡಲಾಗುತ್ತದೆ. ಇದಕ್ಕೆ ವಿವಿಧ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ಯ ಇಲಾಖೆಗಳ ಸಹಕಾರ ಅತ್ಯಂತ ಅವಶ್ಯಕವಾಗಿ ಬೇಕಾಗಿರುತ್ತದೆ. ಜೊತೆಗೆ ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ಸಹಾಯಕರು, ಮತ್ತು 04 ತಾಲೂಕಿನ ಆರ್.ಬಿ.ಎಸ್.ಕೆ ತಂಡದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈತೊಳೆಯುವ ವಿಧಾನಗಳ ಬಗ್ಗೆ ಶಾಲೆಗಳಲ್ಲಿ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾತ್ಯಕ್ಷತೆ ಮಾಡಿ ತೋರಿಸುತ್ತಾರೆ. ಇದರಿಂದ ಅತಿಸಾರ ಭೇದಿಯಿಂದ ಬಳಲುವ ಮಕ್ಕಳ ಆರೋಗ್ಯವನ್ನು ಕಾಪಾಡಿದಂತಾಗುತ್ತದೆ. ಮತ್ತು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಹಾಯಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ತಾಲೂಕ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ''ಓ.ಆರ್.ಎಸ್ ಮತ್ತು ಜಿಂಕ್ ಮಾತ್ರೆಗಳ'' ವಿತರಣ ವಿಭಾಗವನ್ನು ತೆರಿದಿರುತ್ತಾರೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ ಎಸ್. ಯರಗಲ್ಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ಜಂಬಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಶ ಸೇರಿದಂತೆ ಎಲ್ಲಾ ತಾಲೂಕ ಆರೋಗ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ತಾಲೂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಆರ್.ಬಿ.ಎಸ್.ಕೆ ತಂಡದ ವೈದ್ಯರು, ಆರೋಗ್ಯ ಶಿಕ್ಷಣಾಧಿಕಾರಿಗಳು, ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಇಲಾಕೆಯ ಅಧಿಕಾರಿಗಳು, ನಗರಸಭಾ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಜಾಗೃತಿ ಫಲಗಳನ್ನು ಹಾಗೂ ಕರ ಪತ್ರಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.