ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿ: ತಹಶೀಲ್ದಾರ್ ನಿಂಗಪ್ಪ
Give polio vaccination to every child: Tahsildar Ningappa
ದೇವರಹಿಪ್ಪರಗಿ 21: ನವಜಾತ ಶಿಶುವಿನಿಂದ ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದಾರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಪಲ್ಸ್ ಪೋಲಿಯೋ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಗು ಆರೋಗ್ಯವಾಗಿರಲು ಹಾಗೂ ಅಂಗ ನ್ಯೂನತೆಯಿಂದ ತಡೆಯಲು ಈ ಪಲ್ಸ್ ಲಸಿಕೆ ಉಪಯುಕ್ತವಾಗಿದೆ ಎಂದು ಹೇಳಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಸಂದೀಪ ಕಡ್ಲೇವಾಡ ಮಾತನಾಡಿ, ಆರೋಗ್ಯ ಕೇಂದ್ರದ ವ್ಯಾಪ್ತಿಯ 23 ಲಸಿಕಾ ಕೇಂದ್ರಗಳಲ್ಲಿ ಈ ಪಲ್ಸ್ ಪೋಲಿಯೋ ಲಸಿಕೆ ವಿತರಿಸಿ ಸರ್ವ ಸಿದ್ಧತೆ ಮಾಡಲಾಗಿದ್ದು, 4938 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದರು.ಕರವೇ ತಾಲೂಕು ಘಟಕದ ಅಧ್ಯಕ್ಷರಾದ ರಹೀಮಾನ್ ಕನಕಲ್ ಮಾತನಾಡಿ,ದೇಶವನ್ನು ಸಂಪೂರ್ಣವಾಗಿ ಪೋಲಿಯೋ ಮುಕ್ತವನ್ನಾಗಿಸಲು ಸಾರ್ವಜನಿಕರು ಐದು ವರ್ಷದೊಳಗಿನ ಮಕ್ಕಳಿಗೆ ಹತ್ತಿರದ ಪೋಲಿಯೋ ಲಸಿಕೆ ಬೂತ್‌ಗಳಿಗೆ ತೆರಳಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಸಂತೋಷ ಯಡಹಳ್ಳಿ, ಲಕ್ಷ್ಮೀಕಾಂತ ವಾಲಿ, ಪ್ರಭು ಚಿಗರಿ, ರಾಮನಗೌಡ, ಪ್ರವೀಣಕುಮಾರ ಉಪ್ಪಾರ, ಸುಕನ್ಯಾ ಚಳಗೇರಿ, ದಾನಮ್ಮ ಪಾಟೀಲ, ಹಸನಸಾಬ ನದಾಫ್, ಈರಣ್ಣ ಒಂಟೆತ್ತಿನ, ಮಲ್ಲಪ್ಪ ನಾಯ್ಕೋಡಿ, ಮದರಸಾಬ ಮಣ್ಣೂರ ಸೇರಿದಂತೆ ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 