ವಿಕಲ ಚೇತನರಿಗೆ ಅನುಕಂಪಕ್ಕಿಂತ ಅವಕಾಶ ನೀಡುವುದು ಅವಶ್ಯಕವಾಗಿದೆ:ಪಟೇಲ್
Giving opportunities to the mentally challenged is more important than pity: Patel
ಕೊಪ್ಪಳ 03: ವಿಕಲಚೇತನರು ಶಿಕ್ಷಣ ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಕೀರ್ತಿ ಪಡೆದು ಹೆಸರು ಮಾಡಿದ್ದಾರೆ, ಯಾವುದೇ ಕ್ಷೇತ್ರದಲ್ಲಾಗಲಿ ಅವರಿಗೆ ಅವಕಾಶ ನೀಡೋದು ಮುಖ್ಯ ಅವರಿಗೆ ಅನುಕಂಪಕ್ಕಿಂತ ಅವಕಾಶ ನೀಡಿದರೆ ಅವರೇ ತಮ್ಮ ಪ್ರತಿಭೆಗಳ ಮೂಲಕ ಸಾಧನೆ ಮಾಡಿ ತೋರಿಸುವ ಸಾಮರ್ಥ್ಯ ಅವರಲ್ಲಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು,ಅವರು ಕೊಪ್ಪಳ ನಗರದ ತಾಲೂಕ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಯುವಜನ ಸಬಲೀಕರಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಕೊಪ್ಪಳ ಮತ್ತು ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಂಯೋಗದಲ್ಲಿ ಏರಿ್ಡಸಿದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡು, ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು,
ಮುಂದುವರಿದು ಮಾತನಾಡಿ ಅಧಿಕಾರ ಮುಖ್ಯವಲ್ಲ ಅಧಿಕಾರ ಅವಧಿಯಲ್ಲಿ ಮಾಡುವ ಸೇವೆ ಬಹಳ ಮುಖ್ಯವಾಗಿದೆ ವಿಕಲ ಚೇತನರಿಗೆ ಸಿಗಬಹುದಾದ ಸರಕಾರದ ಸೌಲಭ್ಯ ಹಾಗೂ ನಗರಸಭೆ ವತಿಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಮಾಣಿಕ ಪ್ರಯತ್ನ ಮಾಡುವೆ ಈ ಹಿಂದೆಯೂ ಕೂಡ ಸಾಕಷ್ಟು ಸೌಲಭ್ಯಗಳನ್ನು ಸಂಘಟನೆಯ ಕೋರಿಕೆ ಮೇರೆಗೆ ನಗರಸಭೆ ವತಿಯಿಂದ ನೀಡಲಾಗಿದೆ ಮುಂದೆಯೂ ಸಹ ನಿಮ್ಮ ಸಂಘಟನೆ ಜೊತೆಗೆ ನಾನು ಸದಾ ಇರುತ್ತೇನೆ ನಿಮ್ಮ ಸೇವೆ ಮಾಡುವುದರ ಜೊತೆಗೆ ಏನೇ ಸಮಸ್ಯೆಗಳಿದ್ದರೂ ಅದಕ್ಕೆ ನೇರ ಸ್ಪಂದನೆ ನೀಡಿ ಅದರ ಇತ್ಯರ್ಥಕ್ಕಾಗಿ ಶ್ರಮಿಸುತ್ತೇನೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು, ಸಮಾರಂಭದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪರಶುರಾಮ್ ಶಟ್ಟಪ್ಪನವರ್ ನೆರವೇರಿಸಿದರು ,
ವಿಕಲಚೇತನರ ಕಲ್ಯಾಣ ಅಧಿಕಾರಿ ವೆಂಕಟೇಶ್ ದೇಶಪಾಂಡೆ ಸಮೂಹ ಸಾಮರ್ಥ್ಯ ಸಂಸ್ಥೆಯ ಸಹಾಯಕ ನಿರ್ದೇಶಕ ಹೆಚ್ ಏನ್ ಬಸಪ್ಪ, ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಪೂಜಾರಿ ,ಕೊಪ್ಪಳ ಜಿಲ್ಲಾ ಅಧ್ಯಕ್ಷ ಅನ್ವರ್ ಪಟೇಲ್, ಪ್ರಧಾನ ಕಾರ್ಯದರ್ಶಿ, ವೀರೇಶ್ ಹಾಲುಗುಂಡಿ ,ಎಂ ಆರ್ ಡಬ್ಲ್ಯೂ ಯು ಆರ್ ಡಬ್ಲ್ಯೂ ವಿ ಆರ್ ಡಬ್ಲ್ಯೂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಹೊಸ್ಕೆರಿ, ಕೋರ್ ಕಮಿಟಿ ಸದಸ್ಯರಾದ ಈರಣ್ಣ ಕರೆಕುರಿ, ಶಮಿದ್ ಬಿ ಮೀಟ್ಲ ಕೋಡ್, ಸಿದ್ಲಿಂಗಮ್ಮ ಹಾಲಗುಂಡಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 