ಮದಲಗಟ್ಟೆ ಬಳಿ ನದಿಯಲ್ಲಿ ಈಜಲು ಹೋಗಿ ನೀರು ಪಾಲು

Go swimming in the river near Madalgatte and share the water

ಮದಲಗಟ್ಟೆ ಬಳಿ ನದಿಯಲ್ಲಿ ಈಜಲು ಹೋಗಿ ನೀರು ಪಾಲು 

ಹೂವಿನಹಡಗಲಿ 13 :  ತಾಲೂಕಿನ ಮೊದಲಗಟ್ಟೆ ತುಂಭದ್ರಾ ನದಿ ಬಳಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲಾದ ಘಟನೆ ಬುಧವಾರ(ಮಾ.12) ನಡೆದಿದೆ.ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದ ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ನೀರುಪಾಲಾದ ಯುವಕ.ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ.