ಗದಗ 20: ಸದ್ಭಾವನಾ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂದಲ್ಲಿಂದು ಜಾತಿ, ಧರ್ಮ, ಪ್ರದೇಶ, ಭಾಷೆಯ ಬೇಧ ಭಾವವಿಲ್ಲದೇ ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ವೈಯಕ್ತಿಕವಾಗಲಿ ಅಥವಾ ಸಾಮೂಹಿಕವಾಗಿಯಾಗಲಿ ನಮ್ಮಲ್ಲಿರುವ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುವ ಪ್ರಮಾಣ ವಚನವನ್ನು ಬೋಧಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.