ಸದ್ಭಾವನಾ ದಿನ: ಜಿಲ್ಲಾಡಳಿತ ಭನನದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕೊಪ್ಪಳ 20: ``ಸದ್ಭಾವನಾ ದಿನ''ದ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.  

ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶದನ್ವಯ ಪ್ರತಿವರ್ಷದಂತೆ ಈ ವರ್ಷವೂ ಸಹ "ಸದ್ಭಾವನಾ ದಿನ"ವನ್ನು ಮಂಗಳವಾರದಂದು ಆಚರಿಸಲಾಯಿತು.  ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.  ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿದರ್ೇಶಕ ಈರಣ್ಣ ಪಂಚಾಳ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕಿ ಅಮಿತಾ ಯರಗೋಳಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಆರ್.ಜಿ. ನಾಡಗೀರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪುರ, ವಾರ್ತಾ ಇಲಾಖೆಯ ಎಂ. ಅವಿನಾಶ, ಸಿ.ಡಿ.ಪಿ.ಯು ಸಿಂಧು ಎಲಿಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.