ಮುಂದುವರೆದ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ
Government Medical College struggle continues
ವಿಜಯಪುರ 22: 66 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯ ಅನಿರ್ದಿಷ್ಟ ಧರಣಿಯನ್ನು ಬೆಂಬಲಿಸಲು ಬಸವನ ಬಾಗೇವಾಡಿ ಮತಕ್ಷೇತ್ರದ ಕೋಲಾರ ತಾಲೂಕಿನ ರೋಣಿಹಾಳ ಗ್ರಾಮದ ಯಡಿಯೂರು ಸಿದ್ದಲಿಂಗೇಶ್ವರ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಉಪಾಧ್ಯಾಯರಾದ ಎ. ಎಂ. ಪಾಟೀಲ್, ರವರು ಮಾತನಾಡುತ್ತಾ "ವಿಜಯಪುರ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಬಡಮಕ್ಕಳಿಗಾಗಿ,ಕೃಷಿ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಾವಾಗುತ್ತದೆ. ನಮ್ಮ ಜಿಲ್ಲೆಯ ಎಲ್ಲಾ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯುವಂತಾಗಲಿ" ಎಂದು ಹೇಳಿದರು. ಸಹ ಶಿಕ್ಷಕರಾದ ಎ. ಎಸ್. ಹೊನಯಾಳ ಮಾತನಾಡುತ್ತಾ "ಸರಕಾರಿ ಆಸ್ಪತ್ರೆಯ ಹಿಂದೆ 153 ಎಕರೆ ಜಮೀನು ಇರುವುದರಿಂದ ನಮಗೆ ಅತಿ ಬೇಗ ವೈದ್ಯಕೀಯ ಕಾಲೇಜು ಆರಂಭಿಸಬಹುದು ಇಂತಹ ಅವಕಾಶ ಬೇರೆ ಯಾವ ಜಿಲ್ಲೆಗೂ ಇಲ್ಲ. ನಮ್ಮ ಆಸ್ಪತ್ರೆ ಸುಸಜ್ಜಿತ ಜಾಗವನ್ನು ಹೊಂದಿದೆ . ಅದಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸಿ, ಮಕ್ಕಳ ಉನ್ನತ ಶಿಕ್ಷಣ ಕಲಿಯುವಂತಾಗಲಿ ಎಂದು ಹೇಳಿದರು. ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 