ಬರ ಘೋಷಣೆಗೆ ಸರ್ಕಾರ ಬದ್ಧ: ಪ್ರಭುಗೌಡ ತಾಳಿಕೋಟಿ
Government committed to declaring drought: Prabhugouda Talikoti
ತಾಳಿಕೋಟಿ 17: ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ಶೀಘ್ರದಲ್ಲೇ ಸಂಪೂರ್ಣ ಬರ ಘೋಷಣೆ ಮಾಡಿ ರೈತರ ನೆರವಿಗೆ ಧಾವಿಸಲಿದೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದ ಬಳಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ 11 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಬೆಂಬಲ ಸೂಚಿಸಿ ಮಾತನಾಡಿದ ಅವರು, ಈ ಬಾರಿ ಭೀಕರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದರು.
ಈ ತಿಂಗಳ 16 ಅಥವಾ 17ರಂದು ಮೂರನೇ ಹಂತದ ಬರ ಘೋಷಿತ ಪಟ್ಟಿಯನ್ನು ಪ್ರಕಟಿಸುವ ನೀರೀಕ್ಷೆಯಿದ್ದು, ಅದರಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳು ಸೇರುವ ವಿಶ್ವಾಸವಿದೆ. ಒಂದು ವೇಳೆ ಆಗದಿದ್ದರೆ ರೈತರೊಂದಿಗೆ ಸೇರಿ ಹೋರಾಟ ನಡೆಸುವುದಾಗಿ ಅವರು ಭರವಸೆ ನೀಡಿದರು.
ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರೊಂದಿಗೆ ಚರ್ಚಿಸಿ ಸರ್ಕಾರದ ಮೇಲೆ ಒತ್ತಡ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ರೈತರ ಸಮಸ್ಯೆಯಲ್ಲಿ ಪಕ್ಷಭೇದ ಮರೆತು ಎಲ್ಲರೂ ಒಗ್ಗೂಡಬೇಕು ಎಂದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ತಾಪಂ ಮಾಜಿ ಸದಸ್ಯ ಪ್ರಭುಗೌಡ ಬಿರಾದಾರ ಸೇರಿದಂತೆ ರೈತ ಸಂಘ ಹಾಗೂ ಅಂಬೇಡ್ಕರ್ ಸೇನೆಯ ಪದಾಧಿಕಾರಿಗಳು ಮತ್ತು ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 