ಖಾದಿ ಉಡುಪು ಖರೀದಿಗೆ ಉತ್ಸಾಹ ತೋರಿದ ಸರಕಾರಿ ನೌಕರರು
Government employees enthusiastic about buying Khadi clothes
ಕಾರವಾರ, ಫೆ.7: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆಯಂತೆ , ರಾಜ್ಯದ ಎಲ್ಲಾ ಸರ್ಕಾರಿ- ಅನುದಾನಿತ ಸಂಸ್ಥೆಗಳು-ನಿಗಮ- ಮಂಡಳಿ-ಸ್ವಾಯತ್ತ ಸಂಸ್ಥೆಗಳು -ವಿಶ್ವವಿದ್ಯಾಲಯಗಳ ಅಧಿತಕಾರಿ/ನೌಕರರು "ಸ್ವಯಂ ಪ್ರೇರಣೆಯಿಂದ" ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವ ಕುರಿತಂತೆ, ಉತ್ತರ ಕನ್ನಡ ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ, ಹುಬ್ಬಳ್ಳಿ ಯ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾತ್ಕಾಲಿಕ ಮಳಿಗೆಯನ್ನು ತೆರೆಯಲಾಗಿತ್ತು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರಕಾರಿ ನೌಕರರಿಗೆ ಖಾದಿ ಉಡುಪನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ನೌಕರರು ಅತ್ಯಂತ ಉತ್ಸಾಹದಿಂದ ಖಾದಿ ಉಡುಪುಗಳನ್ನು ಖರೀದಿಸಿದರು. ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 