ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿಗೆ ಸರ್ಕಾರದ ಕ್ರಮ

ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿಗೆ ಸರ್ಕಾರದ ಕ್ರಮ Government measures for attendance exemptions and job reservations for sportspersons.

ಲೋಕದರ್ಶನ ವರದಿ 

ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿಗೆ ಸರ್ಕಾರದ ಕ್ರಮ  

ಬಳ್ಳಾರಿ 16 : ರಾಜ್ಯ ಸರ್ಕಾರ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ವಿಶೇಷ ವಿನಾಯಿತಿ ನೀಡಲು ಹಾಗೂ ಕ್ರೀಡಾ ಸಾಧಕರಿಗೆ ಉದ್ಯೋಗ ಮೀಸಲಾತಿ ಒದಗಿಸಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.  

ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶೇ.15 ಮತ್ತು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸುವವರಿಗೆ ಶೇ.25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುತ್ತದೆ. ಹಾಜರಾತಿ ಕೊರತೆಯಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಜಾರಿಗೆ ತರಲಾಗಿದೆ.  

ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳಲ್ಲಿ ಶೇ.2ರಷ್ಟು ಮೀಸಲಾತಿಯನ್ನು ಕ್ರೀಡಾಪಟುಗಳಿಗೆ ನೀಡಲು ಸರ್ಕಾರ ಮುಂದಾಗಿದೆ. ಕಾಮನ್ವೆಲ್ತ್‌, ಏಷ್ಯನ್ ಮತ್ತು ಪ್ಯಾರಾ ಗೇಮ್ಸ್ನಲ್ಲಿ ಪದಕ ವಿಜೇತರಿಗೆ ವಿಶೇಷ ನೇಮಕಾತಿಯೂ ನೀಡಲಾಗುತ್ತಿದೆ.  

ರಾಜ್ಯದ 32 ಕಡೆಗಳಲ್ಲಿ ?36 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿ ನಡೆಯುತ್ತಿದ್ದು, ಕ್ರೀಡಾ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.  

ಕಳೆದ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಏಕಲವ್ಯ, ಕ್ರೀಡಾರತ್ನ, ಕ್ರೀಡಾಪೋಷಕ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಆಗಸ್ಟ್‌ 29ರಂದು ರಾಷ್ಟ್ರೀಯ ಕ್ರೀಡಾ ದಿನದಂದು ಪ್ರದಾನ ಮಾಡಲಾಗುವುದು ಎಂದು ಡಾ. ಪರಮೇಶ್ವರ್ ತಿಳಿಸಿದ್ದಾರೆ.