50 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ
Government medical college protest enters 50th day
ವಿಜಯಪುರ, 06 : 50 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಇಂದು ಗಾಂದಿವೃತ್ತದಲ್ಲಿ ವಿನೂತನ ವಾಗಿ ಮಾನವ ಸರಪಳಿ ಮಾಡಿ ಹೋರಾಟ ಮಾಡಲಾಯಿತು. ಈ ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ರಫೀಕ್ ಟಪಾಲ್ ಇಂಜಿನಿಯರ್ ರವರು ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿಯ ಪ್ರತಿ ಮಕ್ಕಳು ವೈದ್ಯಕೀಯ ಶಿಕ್ಷಣ ಕಲಿಯಲು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.
ನಮ್ಮ ಜಿಲ್ಲೆಯಲ್ಲಿ ಉತ್ತಮ ಸೌಲಭ್ಯಗಳನ್ನು ಹೊಂದಿರುವ ಜಾಗವಿದೆ ಆದರೆ ಇಲ್ಲಿ ಕಾಲೇಜು ನಿರ್ಮಾಣ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಖಾಸಗಿಯವರಿಗೆ ಕಾಲೇಜು ನಿರ್ಮಾಣ ಮುಂದಿನ ದಿನಗಳಲ್ಲಿ ನಮ್ಮಮಕ್ಕಳು ಉನ್ನತ ಶಿಕ್ಷಣ ಪಡೆಯುವುದು ದೂರ ಉಳಿಯಲಿ ಸರಕಾರಿ ಆಸ್ಪತ್ರೆ ಕೂಡ ನಮಗೆ ಕನಸಿನ ಮಾತಾಗಿ ನಮ್ಮ ಕೈ ತಪ್ಪಿ ಹೋಗುತ್ತದೆ ಎಂದು ಹೇಳಿದರು. ಈ ಹೋರಾಟದಲ್ಲಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದ್ದರು.ನಾಗಠಾಣ ಮತ ಕ್ಷೇತ್ರದ ಮಾಜಿ ಶಾಸಕರಾದ ಡಾ.ದೇವಾನಂದ ಚವ್ಹಾಣ ರವರು ಧರಣಿ ಬೆಂಬಲಿಸಿ ಮಾತನಾಡಿ 50 ದಿನಗಳಾದರೂ ಸರ್ಕಾರ ಸ್ಪಂದಿಸದೇ ಇರುವುದು ಜನ ವಿರೋಧಿ ನೀತಿಯನ್ನು ಎತ್ತಿ ತೋರಿಸುತ್ತಿದೆ. ಜನ ಪ್ರತಿನಿಧಿಗಳು ಕೂಡ ಜನರ ಬಗ್ಗೆ ಕಿಂಚಿತು ಕಾಳಜಿ ಹೊಂದಿಲ್ಲ. ನಿಮ್ಮ ಹೋರಾಟದ ಜೊತೆಗೆ ನಮ್ಮ ಪಕ್ಷ ಹಾಗೂ ನಾನು ಕಟಿಬದ್ಧವಾಗಿರುವೆ ನಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಕ್ತಾಯಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 