ಉಣಕಲ್ಲಿನ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರ ನಾಡಿಗೆ ಮಾದರಿ
Government orphanage for mentally challenged girls in Unakkal is a model for the nation
ಧಾರವಾಡ 01: ಹುಬ್ಬಳ್ಳಿ ತಾಲ್ಲೂಕಿನ ಮಂದಮತಿ ಮಹಿಳೆಯರ ಅನುಪಾಲನ ಗೃಹ ಉಣಕಲ್ ಹುಬ್ಬಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಉಣಕಲ್ನ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರದಲ್ಲಿನ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ರವರು ಸಮಲೋಚಿಸಿದರು. ಮನೋವಿಕಲ ಹಾಗೂ ವಿಶೇಷ ಚೇತನ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವು ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿಗೊಳಿಸುತ್ತಿದೆ. ಉಣಕಲ್ಲಿನ ಮನೋವಿಕಲ ಬಾಲಕಿಯರ ಸರ್ಕಾರಿ ಬಾಲಮಂದಿರ ನಾಡಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಇಲಾಖೆಯಲ್ಲಿ ಸಾಕಷ್ಟು ಪರಿವರ್ತನೆ, ಸುಧಾರಣೆಗಳ ಹೊಸ ಕಟ್ಟಡ ಹಾಗೂ ಮಕ್ಕಳ ಆಹಾರ ಬಗ್ಗೆ ಕಟ್ಟು ನಿಟ್ಟಿನಲ್ಲಿ ಇಲಾಖೆ ಕಾರ್ಯೋನ್ಮುಖವಾಗಲಿದೆ ಎಂದರು. ಈ ಸಂದರ್ಭದಲ್ಲಿ ಪ್ರೊಬೇಷನರಿ ಐ ಎ ಎಸ್ ಅಧಿಕಾರಿ ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್‌ಎಸ್ ಕುಕುನೂರ್. ಜಿಲ್ಲಾ ವಿಕಲಚೇತನ ಕಲ್ಯಾಣ ಅಧಿಕಾರಿಗಳು ಧಾರವಾಡ ಶ್ರೀಮತಿ ಸವಿತಾ ಕಾಳೆ, ಜಿಲ್ಲಾ ಯೋಜನಾಧಿಕಾರಿ ಧಾರವಾಡ ದೀಪಕ್ ಮಡಿವಾಳ ಜಿಲ್ಲಾ ವಿಕಲಚೇತನ ಕಲ್ಯಾಣ ಕಚೇರಿ ಯೋಜನಾ ಸಹಾಯಕರು ಆಕಾಶ ಮಾಳಗೆ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 