ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಬೊಮ್ಮಾಯಿ
Government schemes should reach eligible beneficiaries - Bommai
ಹಾವೇರಿ 10 : ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳು ಬಡವರ ಯೋಜನೆಗಳಾಗಿದ್ದು, ಈ ಯೋಜನೆಗಳು ಅವರಿಗೆ ತಲುಪುವಂತೆ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್‌ಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಾರ್ಚ್ ಅಂತ್ಯದೊಳಗೆ ಗುರಿಸಾಧನೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಬ್ಯಾಂಕುಗಳ ಸೆಪ್ಟೆಂಬರ್-2025ರ ಪ್ರಗತಿ ಪರೀಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳೆಯರು ಹಾಗೂ ಇತರೆ ವಲಯಕ್ಕೂ ಗರಿಷ್ಠ ಸಾಲ ನೀಡಬೇಕು ಎಂದು ಸೂಚನೆ ನೀಡಿದರು.
ಬಡವರ ಯೋಜನೆಗಳಿಗೆ ನೀಡುವ ಸಾಲ ರೂ.10 ರಿಂದ 15 ಸಾವಿರ. ಹಣದ ವ್ಯವಹಾರದಲ್ಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಇರದ ಅಧಿಕಾರ ಬ್ಯಾಂಕ್‌ನವರಿಗೆ ಇದೆ. ಇದನ್ನು ತಿಳಿದುಕೊಂಡು ಬ್ಯಾಂಕ್‌ನವರು ಹೃದಯದಿಂದ ಕೆಲಸಮಾಡಬೇಕು. ಮುಂದಿನ ಸಭೆಯೊಳಗೆ ಎಲ್ಲರೂ ಪ್ರಗತಿ ವರದಿ ನೀಡಬೇಕು ಎಂದು ಸೂಚಿಸಿದರು.
ಯೋಜನೆಗಳ ಅರಿವು ಮೂಡಿಸಿ : ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ವಿಶ್ವಕರ್ಮ, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಯೋಜನೆಗಳ ವ್ಯಾಪ್ತಿಗೆ ಬರುವ ಫಲಾನುಭವಿಗಳ ಸರ್ವೇಮಾಡಿ, ಯಾವ ಯೋಜನೆಗಳಿಗೆ ವರ್ಗವಾರು ಎಷ್ಟು ಸಾಲ, ಸಹಾಯಧನ ಸಿಗುತ್ತದೆ, ಅದಕ್ಕೆ ಬೇಕಾದ ದಾಖಲೆಗಳ ಮಾಹಿತಿ ನೀಡಬೇಕು. ಅಧಿಕಾರಿಗಳು ಕಾಳಜಿಯಿಂದ ಮಾಡಿದರೆ ಬಡವರ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನಿತ್, ಬ್ಯಾಂಕ್ ಅಧಿಕಾರಿಗಳಾದ ಸೂರಜ್ ಎನ್, ನಬಾರ್ಡ್‌ನ ರಂಗನಾಥ್ ಹಾಗೂ ಇತರ ಬ್ಯಾಂಕ್‌ಗಳ ಪ್ರಾದೇಶಿಕ ಅಧಿಕಾರಿಗಳು ಉಪಸ್ಥಿತರಿದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 