ನಾಪತ್ತೆಯಾಗಿರುವ ಕೆಆರಿ್ಡಎಲ್ ಅಧಿಕಾರಿ ಪತ್ತೆಗೆ ಸರ್ಕಾರದಿಂದ ಎಲ್ಲ ಕ್ರಮ: ಈಶ್ವರ ಖಂಡ್ರೆ
Government taking all measures to trace missing KRIDL official: Eshwar Khandre
ಬೆಂಗಳೂರು, ಸೆ. 29: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿರುವ ಕೆಆರಿ್ಡಎಲ್ ಗದಗ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಪರ್ವೇಜ್ ಅವರ ಪತ್ತೆಗೆ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಪರ್ವೇಜ್ ಅವರ ತಂದೆ ಜಾಫರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಧೈರ್ಯ ತುಂಬಿದ ಸಚಿವರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿಜಿಪಿ ಅವರೊಂದಿಗೆ ಈ ಕುರಿತು ಮಾತನಾಡಿದ್ದು, ಪರ್ವೇಜ್ ಅವರನ್ನು ಪತ್ತೆಹಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.
ಸರ್ಕಾರದ ಬಳಿ ಹಣದ ಕೊರತೆ ಇಲ್ಲ. ಪರ್ವೇಜ್ ಅವರ ಹಣ ಪಾವತಿಗೆ ಸಂಬಂಧಿಸಿದಂತೆ ಆತಂಕಪಡುವ ಅಗತ್ಯವಿಲ್ಲ. ಅವರು ಸಂಪರ್ಕಿಸಿದರೆ ಯಾವುದೇ ಸಮಸ್ಯೆ ಇದ್ದರೂ ಸರ್ಕಾರ ಪರಿಹರಿಸಲಿದೆ ಎಂದು ಸಚಿವರು ಭರವಸೆ ನೀಡಿದರು. ಕುಟುಂಬದವರಿಗೂ ಧೈರ್ಯದಿಂದ ಇರುವಂತೆ ಸೂಚಿಸಿದರು.
ಪ್ರಕರಣದ ಕುರಿತು ತನಿಖೆ ನಡೆಸುವಂತೆಯೂ ಸೂಚಿಸಲಾಗಿದೆ. ಪರ್ವೇಜ್ ಅವರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಈಶ್ವರ ಖಂಡ್ರೆ ಜಾಫರ್ ಅವರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೆಆರಿ್ಡಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಆರಿ್ಡಎಲ್ ಗದಗ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪರ್ವೇಜ್ ಅವರು ಕೆಲ ದಿನಗಳಿಂದ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಕೆಆರಿ್ಡಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ, ಮುಖ್ಯ ಎಂಜಿನಿಯರ್ಗಳಾದ ತಿಮ್ಮರಾಜಪ್ಪ, ಶ್ರೀನಿವಾಸ್, ವೇಣುಗೋಪಾಲ್ ಹಾಗೂ ಗದಗದ ಎಂಜಿನಿಯರ್ಗಳೊಂದಿಗೆ ಸಭೆ ನಡೆಸಿದರು.
ಅಂಗಾರಕ ಸಂಕಷ್ಟಿ : ನೀಲಗಾರ ಗಣೇಶ ದರ್ಶನಕ್ಕೆ ಬೀಗಿ ಬಂದೋಬಸ್ತ್ : ಭಕ್ತರ ಸಂಖ್ಯೆ ಇಳಿಮುಖ
ಹಳೇ ವೈಷಮ್ಯ: ವ್ಯಕ್ತಿಯ ಅಪಹರಣ, ಕೊಲೆ: ನಾಲ್ವರು ಆರೋಪಿಗಳ ಬಂಧನ
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ 