ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತವನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ: ನ್ಯಾಮಗೌಡ
ಜಮಖಂಡಿ 07:ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತವನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ, ಯಾವುದೇ ಸರ್ಕಾರ ಯೋಜನೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅಭಿಪ್ರಾಯ ಪಟ್ಟರು.
ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ಡಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಭಾಗದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು. ರೈತರ ಸಮಸ್ಯೆಗೆ ಪರಿಹಾರ ಕೊಡುವಲ್ಲಿ ಎಲ್ಲ ಸರ್ಕಾರಗಳು ವಿಫಲವಾಗಿವೆ. ಬಾಗಲಕೋಟೆ, ವಿಜಯಪುರ, ಬೆಳಗಾಂವ ಮೂರು ಜಿಲ್ಲೆಗಳ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕಾದ ಅನಿವಾರ್ಯತೆ ಇದೆ ಎಂದರು. ನ್ಯಾಯಮೂರ್ತಿ ಬಚಾವತ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಬೇಕು. ಉತ್ತರಕ ರ್ನಾಟಕದ ಜೀವನದಿಯಾಗಿರುವ ಕೃಷ್ಣೆಯ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಈ ಭಾಗದ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಬಾಗಲಕೋಟೆಯಲ್ಲಿ ರೈತರು ಕಳೆದ 3 ದಿನಗಳಿಂದ ಯೋಜನೆಯ ಮೂರನೆ ಹಂತದ ಅನುಷ್ಟಾನಕ್ಕೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಬೆಂಬಲಿಸಿ ನಾಡಿದ್ದು ಹೋರಾಟದಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ರೈತರಹಿತ ಕಾಯುವ ಕೆಲಸವಾಗಬೇಕು. ಕೇವಲ ರೈತ ದೇಶದ ಬೆನ್ನೆಲುಬು ಎಂದು ಹೇಳುವುದು ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ರೈತರ ಅನುಕೂಲ ಮಾಡಿಕೊಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮಜರುಗಿಸಬೇಕು ಎಂದರು.