ಕಾರವಾರ ಕದಂಬ ನೌಕಾನೆಲೆಗೆ ಆಗಮಿಸಿದ ರಾಜ್ಯಪಾಲರು
ಕಾರವಾರ 03 : ಮಂಗಳವಾರ ಕಾರವಾರದ ಸೀ ಬರ್ಡ್ ಕದಂಬ ನೌಕಾನೆಲೆಗೆ ಆಗಮಿಸಿದ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಗೆ ನೌಕಾಪಡೆ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ನೌಕಾ ಪ್ರದೇಶ, ಕಾರವಾರದ ವಿ.ಎಸ್.ಎಂ ರಿಯರ್ ಅಡ್ಮಿರಲ್ ಕೆ.ಎಂ. ರಾಮಕೃಷ್ಣನ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಹಾಜರಿದ್ದರು.