ಪದವೀಧರ ಮತದಾರರ ನೋಂದಣಿ ಡಿ.23ರವರೆಗೂ ಕಾಲಾವಕಾಶ: ಜಿಲ್ಲಾಧಿಕಾರಿ

ಪದವೀಧರ ಮತದಾರರ ನೋಂದಣಿ ಡಿ.23ರವರೆಗೂ ಕಾಲಾವಕಾಶ: ಜಿಲ್ಲಾಧಿಕಾರಿ

ಕಾರವಾರ : ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಣಿ ಮಾಡಲು ಡಿಸೆಂಬರ್ 23ರವರೆಗೂ ಕಾಲಾವಕಾಶವಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ಕುಮಾರ್ ಕೆ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು, 2016 ನವೆಂಬರ್ 1ಕ್ಕಿಂತ ಮೊದಲು ಪದವಿ ಪಡೆದಿರುವ ಆರು ತಿಂಗಳಿಗೂ ಹೆಚ್ಚು ಒಂದೆಡೆ ವಾಸಿಸುತ್ತಿರುವ ಸಾಮಾನ್ಯ ನಿವಾಸಿಗಳು ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಹೊಸ ಮತದಾರರ ಪಟ್ಟಿಯನ್ನು ಬಳಸುವಂತೆ ಸವರ್ೋಚ್ಚ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಡಿಸೆಂಬರ್ 7ರಂದು ಕರಡು ಪಟ್ಟಿ ಪ್ರಕಟಿಸಲಾಗಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ 9 ಸಾವಿರ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದು, ಡಿಸೆಂಬರ್ 23ರೊಳಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರ ಮತದಾರರು ತಮ್ಮ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಅವರಿ ತಿಳಿಸಿದರು.

ಉತ್ತರ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ ಜಿಲ್ಲೆಗಳು ಪಶ್ಚಿಮ ಪದವೀಧರ ಕ್ಷೇತ್ರ ವ್ಯಾಪ್ತಿಯಲ್ಲಿ ಬರಲಿದ್ದು, ಕಳೆದ ಚುನಾವಣೆ ಸಂದರ್ಭದಲ್ಲಿ 16 ಸಾವಿರ ಮತದಾರರು ಪಟ್ಟಿಯಲ್ಲಿ ಹೆಸರು ನೋಂದಯಿಸಿದ್ದರು. ಈ ಹಿನ್ನೆಲೆಯಲ್ಲಿ ಮತದಾರರ ನೋಂದಣಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಸಕರ್ಾರದ ವಿವಿಧ ಇಲಾಖೆಗಳಾದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದರ್ೇಶಕರು, ಕಾಲೇಜು ವಿಭಾಗದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದರ್ೇಶಕರು, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದಶರ್ಿ, ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗಳು ಹಾಗೂ ಸಂಘಟಿತ ಅಥವಾ ಅಸಂಘಟಿತ ವಲಯದಲ್ಲಿ ಪದವೀಧರರನ್ನು ನೋಂದಾಯಿಸಲು ಕಾಮರ್ಿಕ ಇಲಾಖೆ ಅದಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಪದವೀ ಪ್ರಮಾಣ ಪತ್ರಗಳನ್ನು ಪಡೆದು ತಮ್ಮ ಅಧ್ಯಕ್ಷತೆಯಲ್ಲಿರುವ ಸಮಿತಿಯು ನೋಂದಣಗೆ ಕ್ರಮ ವಹಿಸಲಿದೆ ಎಂದೂ ಅವರು ತಿಳಿಸಿದರು.

ಅಲ್ಲದೆ, ವಿವಿಧ ರಾಜಕೀಯ ಪಕ್ಷಗಳು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಹೆಚ್ಚಿಸಲು ಮುಂದಾಗಬೇಕು. ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹ ಮಾಡುವ ವಾಹನಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಬಿಎಲ್ಒಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್, ಕಾರವಾರ ಉಪ ವಿಭಾಗಾಧಿಕಾರಿ ಪ್ರಿಯಾಂಗ, ನಗರಸಭೆ ಆಯುಕ್ತ ಎಸ್.ಯೋಗೇಶ್ವರ್ ಉಪಸ್ಥಿತರಿದ್ದರು.