ಧಾರವಾಡ 18: ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸಬಲ್ಲರು. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿನ ಬಗ್ಗೆ ಮಹಿಳೆಯರಿಗೆ ತರಬೇತಿ ನೀಡುವುದು ಒಂದು ಉತ್ತಮ ಬೆಳವಣಿಗೆ ಮತ್ತು ಆಡಳಿತ ಸುಧಾರಣೆಯ ದೃಷ್ಟಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗುವುದು ಎಂದು ಧಾರವಾಡದ ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಚೈತ್ರಾ ಶಿರೂರ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಜನ ಸಹಕಾರಿ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ, ನವದೆಹಲಿ ಅಬ್ದುಲ್ ನಜೀರ್ಸಾಬ್ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮೈಸೂರು ಹಾಗೂ ಜಿಲಾ ಪಂಚಾಯತ್ ಧಾರವಾಡ ಇವರ ಆಶ್ರಯದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜರುಗಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೆಶಕರಾದ ಬಸವರಾಜ ವರವಟ್ಟಿ ಮಾತನಾಡಿ, ಮಹಿಳೆಯರ ಸಬಲೀಕರಣ ಮತ್ತು ಸಕರ್ಾರದ ಸವಲತ್ತುಗಳ ಬಗ್ಗೆ ಮಹಿಳಾ ಸದಸ್ಯರಲ್ಲಿ ಅರಿವು ಅಗತ್ಯ ಎಂದರು. ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನುಪಮಾ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾದೇವಿ ಅಂಗ್ರೋಳ್ಳಿ ಸ್ವಾಗತಿಸಿದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಎ.ಎಸ್. ಕವಿತಾ, ಎಎನ್ಎಸ್ಎಸ್ಐಆರ್ಡಿ ಪ್ರಾದೇಶಿಕ ಕೇಂದ್ರದ ಉಪನಿದರ್ೆಶಕ ಬಿ.ಸ್. ಮುಗನೂರಮಠ ಹಾಗೂ ಆಶಾ ಪ್ರಳಯಕಲ್ಮಠ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಮೇಲ್ವಿಚಾರಕಿಯರಾದ ಕವಿತಾ ನೆಲಗುಡ್ಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.