ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ
ಧಾರವಾಡ 09: ಇಲ್ಲಿನ ತಪೋವನ ನಗರದ ಶ್ರೀ ಈಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ,ಸಿ ಟ್ರಸ್ಟ್‌ನ ಧಾರವಾಡ ಗ್ರಾಮೀಣ ಯೋಜನಾ ಕಚೇರಿ ವತಿಯಿಂದ ಮಂಜೂರಾದ ಅನುದಾನದ ಚೆಕ್‌ನ್ನು ಇತ್ತೀಚೆಗೆ ಹಸ್ತಾಂತರಿಸಲಾಯಿತು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ವಸಂತ ಅರ್ಕಾಚಾರ 1.50 ಲಕ್ಷ ರೂಪಾಯಿ ಅನುದಾನದ ಚೆಕ್‌ನ್ನು ಈಶ್ವರ ದೇವಸ್ಥಾನದ ಕಮೀಟಿಗೆ ಹಸ್ತಾಂತರಿಸಿ ಮಾತನಾಡಿ,
ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಧರ್ಮಾಧಿಕಾರಿಯಾಗಿ ಕ್ಷೇತ್ರದ ವತಿಯಿಂದ ಹಲವಾರು ಯೋಜನೆಗಳನ್ನು ನಾಡಿನಾದ್ಯಂತ ಅನುಷ್ಠಾನಗೊಳಿಸುತ್ತಿದ್ದಾರೆ.
ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ಕೆರೆಗಳ ಅಭಿವೃದ್ಧಿ ನಿರ್ಗತಿಕರಿಗೆ ವಾತ್ಸಲ್ಯ ಮನೆ ನಿರ್ಮಾಣ,ಮಾಶಾಸನ, ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಹೀಗೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯದ್ಯಂತ ನೀಡಿದ್ದಾರೆ. ಅದೇ ರೀತಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೂ ಸಹ ಅನುದಾನವನ್ನು ನೀಡಿ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸಹ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ ಮಾತನಾಡಿ, ಧರ್ಮಾಧಿಕಾರಿಗಳು
ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಲಯದಲ್ಲಿ ಸುಧಾರಣೆ ಮಾಡುವ ನಿಟ್ಟಿನಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅದರಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲು ಅನುದಾನ ನೀಡುವುದು ಕೂಡ ಒಂದಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕ ಯೋಜನಾಧಿಕಾರಿ ಮಯೂರ ತೋರಸ್ಕರ,ದೇವಸ್ಥಾನ ಕಮೀಟಿಯ ಜಿ.ಎಮ್.ನಿಡಗುಂದಿ, ಎಚ್.ಆರ್.ಲಾತೂರ, ಎಮ್.ಎಮ್.ಕಲಾದಗಿ. ಸೇವಾ ಪ್ರತಿನಿಧಿ ಹೇಮಾ, ಗೀತಾ, ದೇವಸ್ಥಾನ ಕಮೀಟಿ ಹಾಗೂ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.