ಶಾರದಾ ವಿದ್ಯಾಪೀಠ ಪ್ರೌಡ ಶಾಲೆ ಯಲ್ಲಿ ವಿಜ್ಞಾನ ಹಿಗಣಿತ ಮೇಳಕ್ಕೆ ಭರ್ಜರಿ ಸ್ಪಂದನೆ
Great response to the Science and Mathematics Fair at Sharada Vidyapeeth High School
ಬಳ್ಳಾರಿ 22: ನಗರದ ಶಾರದಾ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಮೇಳವನ್ನು ಉತ್ಸಾಹಭರಿತವಾಗಿ ಹಮ್ಮಿಕೊಳ್ಳಲಾಗಿತ್ತು. ಮೇಳವನ್ನು ಶಾಲೆಯ ಉಪಾಧ್ಯಕ್ಷರಾದ ಶ್ರೀಮತಿ ಡಾ. ನಾಗರತ್ನ ಸುಯಜ್ಞ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಹರಿಕುಮಾರ್ ಮತ್ತು ರಂಗನಾಥ ಅವರು ಉದ್ಘಾಟಿಸಿದರು. ಮೇಳದಲ್ಲಿ ಬೇಬಿ ಕ್ಲಾಸ್ನಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿಗಳು ಭಾಗವಹಿಸಿ, ಗಣಿತ ಹಾಗೂ ವಿಜ್ಞಾನ ಸಂಬಂಧಿತ ವಿವಿಧ ಪ್ರಯೋಗಗಳು ಮತ್ತು ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ಚಂದ್ರಯಾನ, ರಾಕೆಟ್ ಹಾಗೂ ತುಂಗಭದ್ರಾ ಅಣೆಕಟ್ಟಿನ ಮಾದರಿಗಳನ್ನು ನಿರ್ಮಿಸಿ ತಮ್ಮ ಪ್ರತಿಭೆಯನ್ನು ಮೆರೆದರು.ಕ ಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲಾ ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಶ್ರಮ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಕವಿತಾ ವಾದಿರಾಜ್ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹುರಿದುಂಬಿಸಿ, ವಿಜ್ಞಾನ ಹಿಗಣಿತ ಮೇಳ ಯಶಸ್ವಿಯಾಗಲು ಪ್ರಮುಖ ಪಾತ್ರವಹಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 