ನೂತನ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿಬೇಕು : ಅಜೀತಕುಮಾರ ದೇಸಾಯಿ
Greater emphasis should be given to the development of new taluks: Ajit Kumar Desai
ಯರಗಟ್ಟಿ 05: ರಾಜ್ಯ ಬಜೆಟ್‌ನಲ್ಲಿ ತಾಲೂಕು ಮಟ್ಟದ ಅಭಿವೃದ್ಧಿ, ಮೂಲಸೌಕರ್ಯ, ಕೃಷಿ, ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ಲಭ್ಯವಾಗುತ್ತಾ? 2026-27ನೇ ಸಾಲಿನ ಬಜೆಟ್‌ನಲ್ಲಿ ವಿಶೇಷವಾಗಿ ಹೊಸ ತಾಲೂಕುಗಳ ಅಭಿವೃದ್ಧಿ, ನೀರಾವರಿ ಯೋಜನೆಗಳು, ಕೈಗಾರಿಕಾ ವಸಾಹತುಗಳು ಮತ್ತು ಪ್ರವಾಸೋದ್ಯಮದಂತಹ ನಿರ್ದಿಷ್ಟ ವಲಯಗಳಿಗೆ ಬೇಡಿಕೆಗಳು ಮತ್ತು ಯೋಜನೆಗಳನ್ನು ಘೋಷಿಸಲಾಗುತ್ತದೆ. ಬಜೆಟ್‌ನಲ್ಲಿ ನೂತನ ತಾಲೂಕಿಗೆ ಅನುದಾನ ಬಂದರೆಮೂಲಸೌಕರ್ಯ ಹಾಗೂ ಅಭಿವೃದ್ಧಿ ಸಿಗುವ ಸಾಧ್ಯತೆ ದೊರೆಯುತ್ತದೆ. ಹೊಸ ತಾಲೂಕುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ಮೂಲಸೌಕರ್ಯಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ನೀರೀಕ್ಷೆಯಿದೆ. ನೀರಾವರಿ ಯೋಜನೆಗಳು: ತಾಲೂಕಿನಲ್ಲಿ ಸತ್ತಿಗೇರಿ ಏತ ನೀರಾವರಿ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿದೆ ಹಾಗೂ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಅಥವಾ ಚೆಕ್ ಡ್ಯಾಮ್ ನಿರ್ಮಾಣದ ಯೋಜನೆಗಳಿಗೆ ಅನುದಾನ ಸಿಗಬಹುದಾ?
ಪ್ರವಾಸೋದ್ಯಮ:ತಾಲೂಕಿನ ವರವಿ ಕೋಳ ಹಾಗೂ ಸೊಗಲ ಸೋಮೇಶ್ವರ, ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿ ಮತ್ತು ವಿಶೇಷ ಯೋಜನೆಗಳಿಗೆ ಬಜೆಟ್‌ನಲ್ಲಿ ಅವಕಾಶ ಸಿಗುತ್ತಾ? ವಿಶೇಷವಾಗಿ, 16ನೇ ಹಣಕಾಸು ಆಯೋಗದ ವರದಿಯ ಅನ್ವಯ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಳವಾಗಿದ್ದು (4.131ಅ), ಇದು ತಾಲೂಕು ಮಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆಯನ್ನು ಹೆಚ್ಚಿಸಿದೆ. ಹೇಳಿಕೆ: ನೂತನ ತಾಲೂಕಿನಲ್ಲಿ ವಿವಿಧ ಇಲಾಖೆಗಳು ಪ್ರಾರಂಭಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ನೂತನ ತಾಲೂಕುಗಳಿಗೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿಬೇಕು.ಅಜೀತಕುಮಾರ ದೇಸಾಯಿ, ಮಾಜಿ ಜಿ.ಪಂ. ಸದಸ್ಯರು, ಯರಗಟ್ಟಿಹೇಳಿಕೆ: ಯರಗಟ್ಟಿ ತಾಲೂಕಿಗೆ ಈಗಾಗಲೇ ಪೊಲೀಸ್ ಠಾಣೆ ಮತ್ತು ಮಿನಿ ವಿಧಾನಸೌಧ, ಅಗ್ನಿಶಾಮಕ ಠಾಣೆ ಮಂಜುರಾಗಿದೆ ಇನ್ನೂಳಿದ ಇಲಾಖೆಗಳು ಹಂತ ಹಂತವಾಗಿ ಪ್ರಾರಂಭಿಸಲು ಮತ್ತು ತಾಲೂಕಿ ನೀರಾವರಿ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಕೊಡುವಂತೆ ಕೇಳಿದ್ದೆನೆ. ವಿಶ್ವಾಸ ವೈದ್ಯ, ಶಾಸಕರು ಸವದತ್ತಿ ಯಲ್ಲಮ್ಮ ವಿಧಾನ ಸಭಾ ಕ್ಷೇತ್ರ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 