ಜೀವನದ ಉದ್ದೇಶ ಸ್ಪಷ್ಟವಾಗಿದ್ದಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು: ಖಾಜಿ
Greatness can be achieved if the purpose of life is clear: Qazi
ಜೀವನದ ಉದ್ದೇಶ ಸ್ಪಷ್ಟವಾಗಿದ್ದಲ್ಲಿ ಶ್ರೇಷ್ಠತೆಯನ್ನು ಸಾಧಿಸಬಹುದು: ಖಾಜಿ
ವಿಜಯಪುರ 29: ಜೀವನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಮೊದಲನೆಯದಾಗಿ ತನ್ನ ಜೀವನದ ಉದ್ದೇಶವನ್ನು ತಿಳಿದುಕೊಳ್ಳುವುದು ಅತ್ಯಂತ ಮುಖ್ಯ ಎಂದು ಪರಿಣಿತರು ಹೇಳಿದ್ದಾರೆ. ಜೀವನದ ಉದ್ದೇಶ ಸ್ಪಷ್ಟವಾಗಿದ್ದರೆ ಮಾತ್ರ ಶಿಕ್ಷಣದ ಮೂಲಕ ನಿಜವಾದ ಶ್ರೇಷ್ಠತೆಯನ್ನು ಸಾಧಿಸಬಹುದು ಎಂದು ಹೈದರಾಬಾದ್ ಮೂಲದ ಜಹಾಂಗೀರ್ ಸಾಬ ಖಾಜಿ ಅವರು ಹೇಳಿದರು.
ವಿಜಯಪುರದಲ್ಲಿ ಸಿಕ್ಯಾಬ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಹೊಸ ಶೈಕ್ಷಣಿಕ ವರ್ಷ ಆರಂಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು.
ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ಇಂದು ತಂತ್ರಜ್ಞಾನ ಕ್ಷೇತ್ರದ ಹೃದಯವಾಗಿದೆ. ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ಕೌಶಲ್ಯ ಗಳಿಸಿದರೆ ಭವಿಷ್ಯದಲ್ಲಿ ಅನೇಕ ಉದ್ಯೋಗಾವಕಾಶಗಳು ಸಿಗುತ್ತವೆ ಮತ್ತು ಉದ್ಯೋಗವನ್ನು ಸೃಷ್ಟಿ ಮಾಡಲಾಗುತ್ತದೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕ್ಯಾಂಪಸ್ ಮತ್ತೆ ವಿದ್ಯಾರ್ಥಿಗಳ ಚಲನವಲನದಿಂದ ಚೈತನ್ಯ ತುಂಬಿತ್ತು. ಹೊಸ ಶೈಕ್ಷಣಿಕ ವರ್ಷ ಆರಂಭದೊಂದಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಮಶೀನ್ ಲರ್ನಿಂಗ್ ಶ್ರಿ ಅಂದರೆ ಎಐಎಂಎಲ್ ವಿಭಾಗದ ಹೊಸ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ್ದು, ಉತ್ಸಾಹದ ವಾತಾವರಣ ನಿರ್ಮಾಣಗೊಂಡಿತ್ತು.
ಎಂ ಎಲ್ ವಿಭಾಗ ಮುಖ್ಯಸ್ಥರಾದ ಬೆನಜೀರ್ ಮುಂತೆಶಿರ್ ಮಾತನಾಡಿ ಸಂಪತ್ತು ಕಳೆದುಹೋದರೆ ಏನೂ ಕಳೆದುಹೋದಂತಲ್ಲ, ಅದನ್ನು ಮತ್ತೆ ಸಂಪಾದಿಸಬಹುದು. ಆದರೆ ಆರೋಗ್ಯ ಕಳೆದುಹೋದರೆ ಜೀವಿತದಲ್ಲಿ ದೊಡ್ಡ ನಷ್ಟವಾಗುತ್ತದೆ. ಚರಿತ್ರೆ ಕಳೆದುಹೋದರೆ ಎಲ್ಲವನ್ನೂ ಕಳೆದುಕೊಂಡಂತೆಯೇ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ. ಸೈಯದ್ ಅಬ್ಬಾಸ್ ಅಲಿ ಪ್ರೊ. ಆರೀಫ್ ಮಕಾಂದಾರ, ಪ್ರೊ. ರೇಖಾ ಬಿರಾದಾರ, ಪ್ರೊ. ಆಫ್ರಿನ್ ಮುಜಾವರ, ಪ್ರೊ. ಶಾಹಿನ್ ಇಂಡಿಕರ್, ಪ್ರೊ. ಮುಬಿನಾ ಭಾಗವಾನ ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 