ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಾಜಾಕ್
Grow through sports: Abdul Razak
ಕೊಪ್ಪಳ 5: ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಾಜಾಕ್ ಅವರು ತಿಳಿಸಿದರು.ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2025-26 ಸಾಲಿನ ಅಂತರ ಮಹಾವಿದ್ಯಾನಿಲಯಗಳ ಪೆಂಕಾಕ್ ಸೀಲಾತ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಇಂದು ಕ್ರೀಡಾ ಕ್ಷೇತ್ರದಲ್ಲಿ ಬಹಳಷ್ಟು ಸ್ಪರ್ದೇ ಇದೆ. ಆದರೆ ಪೆಂಕಾಕ್ ಸೀಲಾತ್ ಕ್ರೀಡೆಯಲ್ಲಿ ಸ್ಪರ್ಧೆ ಕಡಿಮೆ ಇದೆ. ಸ್ವಲ್ಪ ಚನ್ನಾಗಿ ಆಟ ಆಡಿದರೆ ಖಂಡಿತ ಬಹುಮಾನ ಪಡೆಯುತ್ತಿರಿ. ಸರಕಾರದಿಂದ ಕ್ರೀಡೆಗಳಿಗೆ ಬರುವ ಅನುದಾನವನ್ನು ಸದುಪಯೋಗ ಪಡೆದುಕೊಂಡು ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ. ಅಲ್ಲಮ ಪ್ರಭು ಬೆಟ್ಟದೂರು ಅವರು ಮಾತನಾಡುತ್ತ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು. ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಮನೋಧರ್ಮ ಬೆಳೆಯಬೇಕು. ಗೆಲ್ಲುವುದು ಸೋಲುವುದು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡೆಗಳ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದ ಸಂಘಟನೆ ಕಾರ್ಯದರ್ಶಿ ಮತ್ತು ದೈಹಿಕ ಶಿಕ್ಷಣ ಭೋಧಕರಾದ ಪ್ರದೀಪ್ ಕುಮಾರ ಅವರು ಮಾತನಾಡುತ್ತ ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು.
ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು. ಸರಕಾರಿ ಹುದ್ದೆಗಳಲ್ಲಿ ಕ್ರೀಡಾ ಮೀಸಲಾತಿ ಇದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು. ಕ್ರೀಡೆಗಳು ನಮ್ಮನ್ನು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿಸುತ್ತವೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಮಾತನಾಡುತ್ತ ವಿದ್ಯಾರ್ಥಿಗಳು ಹೊಸ ಹೊಸ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಆಧುನಿಕ ಕಾಲದಲ್ಲಿ ನಮಗೆ ಕ್ರೀಡೆಗಳು ಬಹಳ ಮುಖ್ಯ. ಇದರಿಂದ ನಮ್ಮ ಅರೋಗ್ಯ ವೃದ್ಧಿ ಆಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಬಿ. ಜಿ ಕರಿಗಾರ, ವಿಠಲ ಬಿ ಜಾಬ ಗೌಡರ್, ಎ ಬಸವರಾಜ, ಮಂಜುನಾಥ್ ಅರೇಂಟುನೂರು, ಗವಿಸಿದ್ದಪ್ಪ ಮುತ್ತಾಳ, ಮಂಜುನಾಥ್ ಗೊಂಡಬಾಳು, ವಿನೋದು, ವಿಶ್ವನಾಥ್ ನಡುಕಟ್ಟಿ, ಶುಭ, ಸುಮಿತ್ರಾ ಹಾಗೂ ಸುಮಯ್ಯ ಇತರರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಡಾ. ಹುಲಿಗೆಮ್ಮ ಅವರು ನಿರೂಪಿಸಿದರು. ಡಾ. ನರಸಿಂಹ ಸ್ವಾಗತಿಸಿ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 