ಸಂಗಾಪುರದಲ್ಲಿ ಜಾನಪದ ಸಂಗೀತದ ಮೂಲಕ ಗ್ಯಾರಂಟಿ ಪ್ರಚಾರ
Guaranteed promotion through folk music in Singapore
ಕೊಪ್ಪಳ 0: ರಾಜ್ಯದಲ್ಲಿ ಪ್ರಸ್ತುತ ಸರಕಾರ ಬಂದನಂತರ ಬಡಜನರ ನಾಡಿಮಿಡಿತ ಅರಿತು ಸರ್ವರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದು ಮಹತ್ವದ ಕಾರ್ಯ ಮಾಡಿದೆ. ವಿಶೇಷವಾಗಿ ದೇಶದಲ್ಲಿಯೇ ಈ ರೀತಿಯ ಬಡವರ ಯೋಜನೆ ಜಾರಿಗೆ ತಂದಿರುವುದು ಪ್ರಥಮ ಎನ್ನಬಹುದು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕ ಚನ್ನಯ್ಯ ಹಿರೇಮಠ ಹೇಳಿದರು.
ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯವರ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಾಂಸ್ಕೃತಿಕ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ) ಕುಷ್ಟಗಿ ಕಲಾತಂಡದವರು ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಏರಿ್ಡಸಿದ್ದ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಚಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ತಮಟೆ ನುಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಗ್ರಾಮದ ಗಣ್ಯರಾದ ಜಿಲಾನಿ ಸಾಹೇಬ್, ಮಂಜು ಹುಲಸಗೇರಿ ಭಾಗವಹಿಸಿದ್ದರು. ಮಹಿಳಾ ಮಂಡಳದ ಗಂಗಮ್ಮ ಹಿರೇಮನಿ, ಮೀನಾಕ್ಷಮ್ಮ, ಪಾರವ್ವ, ರತ್ನಮ್ಮ ಉಪಸ್ಥಿತರಿದ್ದರು. ನಂತರ ಕಲಾತಂಡದಿಂದ ಸರಕಾರದ ಪಂಚ ಯಾರಂಟಿ ಯೋಜನೆಗಳ ಮಹತ್ವ, ಆರೋಗ್ಯ, ಶಿಕ್ಷಣ ಕುರಿತು ವಿವಿಧ ಜಾನಪದ ಗೀತೆಗಳು ಹಾಗೂ ಸಂಭಾಷಣೆಯ ಮೂಲಕ ಪ್ರಸ್ತುತಪಡಿಸಿ ಜನ-ಮನ ರಂಜಿಸಿದರು.
ಕಲಾತಂಡದಲ್ಲಿ ನಿಂಗಪ್ಪ ಸೊಲ್ಲಾಪೂರ, ರಾಮಣ್ಣ ಮುರಡಿ, ಗೌರಮ್ಮ ಕುರಿ ಭಾಗವಹಿಸಿದ್ದರು. ಗಂಗಾವತಿ ತಾಲೂಕಿನ ವಿವಿಧ 20 ಗ್ರಾಮಗಳಲ್ಲಿ ಕಲಾತಂಡವು ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಿಗೆ ಸರಕಾರದ ಯೋಜನೆಗಳ ಕುರಿತು ಜಾನಪದ ಗೀತೆಗಳು ಮತ್ತು ಸಂಭಾಷಣೆಯ ಮೂಲಕ ಜಾಗೃತಿ ಮೂಡಿಸುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 