ಗೌರವಾಧ್ಯಕ್ಷರಾಗಿ ಗುಡ್ಲಾನೂರ ಆಯ್ಕೆ
ಕೊಪ್ಪಳ 11: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಪ್ಪಳ ಜಿಲ್ಲಾ ಘಟಕಕ್ಕೆ ಗೌರವ ಅಧ್ಯಕ್ಷರಾಗಿ ಸಂಘದ ನಿಕಟ ಪೂರ್ವ ಅಧ್ಯಕ್ಷರು ಹಾಗೂ ವಿನಯವಾಣಿ ಪತ್ರಿಕೆಯ ಸಂಪಾದಕರಾದ ಬಸವರಾಜ ಗುಡ್ಲಾನೂರ ಆಯ್ಕೆಗೊಂಡಿದ್ದಾರೆ.
ಕೆಯುಡಬ್ಲ್ಯೂಜೆ ಕೊಪ್ಪಳ ಜಿಲ್ಲಾ ಘಟಕಕ್ಕೆ ಅಧ್ಯಕ್ಷರಾಗಿದ್ದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹನುಮಂತ ಹಳ್ಳಿಕೇರಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಸಂಘಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಜಿಲ್ಲಾ ಸಂಘಕ್ಕೆ ಗೌರವ ಅಧ್ಯಕ್ಷರನ್ನಾಗಿ ಎಲ್ಲರೂ ಸೇರಿ ಆಯ್ಕೆ ಮಾಡಿ ಕೊಂಡಿದ್ದಾರೆ. ಸಂಘದ ನೂತನ ಅಧ್ಯಕ್ಷರಿಗೆ ಮತ್ತು ಇತರ ಎಲ್ಲಾ ಪದಾಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿ ಸಂಘಟನೆ ಬೆಳೆಸುವಂತೆ ಶ್ರಮಿಸಲು ಸಂಘದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಎಂ ಸಾಧಿಕಅಲಿ ವಿಶೇಷ ಅಹ್ವಾನಿತ ರಾಜ್ಯ ಸದಸ್ಯ ಎಚ್‌ಎಸ್ ಹರೀಶ್ ಮತ್ತು ರಾಷ್ಟ್ರೀಯ ಮಂಡಳಿ ಸದಸ್ಯ ಜಿಎಸ್ ಗೋನಾಳ ಸಲಹೆ ನೀಡಿದ್ದಾರೆ.