ಗುರುಸೇವೆಯೆ ಪುಟ್ಟರಾಜರ ಬದುಕಿನ ಮೂಲಮಂತ್ರವಾಗಿತ್ತು: ಅನಿತಾ ಹಿರೇಮಠ
Guru Seva was the basic mantra of Puttaraja's life: Anita Hiremath
ಶಿಗ್ಗಾವಿ: ಪಂಡಿತ ಪಟ್ಟರಾಜ ಗವಾಯಿಗಳು ತಮ್ಮ ಗುರುಗಳಾದ ಪಂಚಾಕ್ಷರಿ ಗವಾಯಿಗಳ ಮೇಲಿಟ್ಟಿದ್ದ ಭಕ್ತಿಯು ಇಂದಿನ ತಲೆಮಾರಿನ ವಿದ್ಯಾರ್ಥಿಗಳಿಗೆ ದಾರೀದೀಪವಾಗಿದೆ. ಗುರುಸೇವೆಯನ್ನೇ ಅವರು ಬದುಕಿನ ಮೂಲಮಂತ್ರವಾಗಿಸಿಕೊಂಡಿದ್ದರು ಎಂದು ಮುಖ್ಯೋಪಾಧ್ಯಾಯಿನಿ ಅನಿತಾ ಹಿರೇಮಠ ಹೇಳಿದರು.
ಪಟ್ಟಣದ ಎಂ.ಪಿ.ಎಂ ಶಿಕ್ಷಣ ಸಂಸ್ಥೆಯ ಸಂಸ್ಕೃತಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಗಾನಯೋಗಿ ಪಂಡಿತ ಪುಟ್ಟರಾಜ ಕವಿಗವಾಯಿಗಳ 112ನೇ ಜನ್ಮದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಟ್ಟರಾಜ ಗವಾಯಿಗಳು ಕೇವಲ ಸಂಗೀತಗಾರರಲ್ಲ, ಅವರು ಅಸಂಖ್ಯಾತ ಅಂಧರ ಬಾಳಿಗೆ ಜ್ಯೋತಿಯಾದವರು. ಬಾಲ್ಯದಲ್ಲಿಯೇ ದೃಷ್ಟಿ ಕಳೆದುಕೊಂಡರೂ ಹಠ ಬಿಡದೆ ಸಂಗೀತ ಮತ್ತು ಸಾಹಿತ್ಯವನ್ನು ಕಲಿತು, ಅವುಗಳ ಸಾರವನ್ನು ಪುಸ್ತಕಗಳ ರೂಪದಲ್ಲಿ ಜಗತ್ತಿಗೆ ಸಾರಿದವರಾಗಿದ್ದಾರೆ ಎಂದರು.
ಶಿಕ್ಷಕಿ ದೀಪಾ ಗೋಗೇರಿ ಮಾತನಾಡಿ, ಪುಟ್ಟರಾಜ ಗವಾಯಿಗಳು ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಎರಡರಲ್ಲೂ ಪಾರಮ್ಯ ಸಾಧಿಸಿದ್ದರು. ಅವರು ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು. ಬಸವ ಪುರಾಣದಂತಹ ನೂರಾರು ಕೃತಿಗಳನ್ನು ರಚಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಭಾರತ ಸರ್ಕಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ ಎಂಬುದು ನಮ್ಮೆಲ್ಲರ ಹೆಮ್ಮೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ದೇವರಾಜ ಸುಣಗಾರ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಗವಾಯಿಗಳ ನೆಚ್ಚಿನ ವಚನಗಳನ್ನು ಗಾಯನ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಸವಿತಾ ಗೌರಿಮಠ, ಸ್ವೇತಾ ದುಬೆ, ಸ್ವಪ್ನಾ ಪಟ್ಟೆದ, ಗಾಯಿತ್ರಿ ಎಂ.ವಿ, ರಾಜೇಶ್ವರಿ ಪಾಟೀಲ, ಕವಿತಾ ಲಂಗೋಟಿ, ಗದಿಗೆಪ್ಪ ಅಣ್ಣಿಗೇರಿ, ಸವಿತಾ ಹೊನ್ನಣ್ಣವರ, ಲಕ್ಷ್ಮೀ , ನಿಖಿತಾ ಕಂಕನಾವಡ, ಪೂಜಾ ಹಿರೇಮಠ ಸೇರಿದಂತೆ ಇತರರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 