ಲೋಕದರ್ಶನ ವರದಿ
ಬಳ್ಳಾರಿ 16:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ವಿ.ಸಿ.ಗುರುರಾಜ್ ಅವರು ಅವಿರೋಧ ಆಯ್ಕೆ ಹಿನ್ನಲೆಯಲ್ಲಿ ಸಂಘದ ಸದಸ್ಯರು ಹಾಗೂ ನೌಕರರು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಬಳ್ಳಾರಿ ತಾರನಾಥ ಆಯುರ್ವೇದ್ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ.ರಾಜಶೇಖರ ಗಾಣಿಗೇರ, ಆಹಾರ ನಿರೀಕ್ಷಕರಾದ ರವಿ ರಾಠೋಡ, ಶಿಕ್ಷಕ ತಿಪ್ಪಾರೆಡ್ಡಿ, ಶ್ರೀನಿವಾಸ್ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಮತ್ತಿತರರು ಇದ್ದರು.