ಸಮರ್ಕವಾದ ನೀರು ಸರಬರಾಜಿಗೆ ಸಂಬಂಧಿಸಿದ ಅಗತ್ಯ ಕ್ರಮವಹಿಸಲು ಗುರುಸ್ವಾಮಿ ಸೂಚನೆ
Guruswamy instructs to take necessary steps for effective water supply
ಇಂಡಿ 19: ತಾಲ್ಲೂಕಿನ್ಯಾದಂತ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ ಎಂದು ಇಂಡಿ ಉಪವಿಭಾಗಾಧಿಕಾರಿ ಗುರುಸ್ವಾಮಿ ಹೇಳಿದರು. ಗುರುವಾರ ತಾಲೂಕ ಪಂಚಾಯತ ಸಭಾ ಭವನದಲ್ಲಿ ಕುಡಿಯುವ ನೀರಿನ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು. ಬೇಸಿಗೆಯಲ್ಲಿ ಯಾವುದೇ ನೀರಿನ ಅಭಾವವಾಗದಂತೆ ಸಮರ್ಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ತಿಳಿದುಕೊಂಡು ಮಾಹಿತಿ ಸಲ್ಲಿಸಬೇಕು. ನಗರ ನೀರು ಸರಬರಾಜಿಗೆ ಸಂಬಂಧಿಸಿದ ಅಗತ್ಯ ಮುಜಾಗೃತಾ ಕ್ರಮವಹಿಸಬೇಕು.
ಗ್ರಾಮ ಪಂಚಾಯತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ಪಂ ಇಂಡಿ ರವರು ಮಾತನಾಡಿ ಕಳೆದ ವರ್ಷದಲ್ಲಿ ಅಂಜುಟಗಿ ಕೊಳುರಗಿ ಝಳಕಿ ಹಡಲಸಂಗ್ ಬಸನಾಳ, ಚವಡಿಹಾಳ, ಚೊರಗಿ , ನಿಂಬಾಳ ಕೆಡಿ, ಚಿಕ್ಕ ಬೆವನೂರ, ತಡವಲಗಾ ಭತಗುಣಕಿ , ಸಾಲೋಟಗಿ, ಅಡವಿ ವಸ್ತಿಗಳು ಇನ್ನೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಿದ್ದು ಈ ಬಾರಿ ಯಾವುದೇ ಸಮಸ್ಯೆ ಆಗದಂತೆ ಮುಜಾಗ್ರತ ಕ್ರಮ ಕೈಕೊಳ್ಳಬೇಕು ಎಂದರು.
ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ಖುದ್ದಾಗಿ ಪರೀಶೀಲನೆ ನಡೆಸಬೇಕು. ಎಲ್ಲಾ ಬೋರವೆಲ್ ಗಳ ಮಾಹಿತಿ ಕ್ರೋಢೀಕರಿಸಬೇಕು. ಚಾಲ್ತಿಯಲ್ಲಿರುವ ಬೋರವೆಲ್ ಗಳು ಪರೀಶೀಲನೆ ಮಾಡಬೇಕು ಎಂದು ಸೂಚಿಸಿದರು. ಚಡಚಣ ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾತನಾಡಿ ಗ್ರಾಮೀಣ ಹಂತದಲ್ಲಿ ನೀರಿನ ಮೂಲಗಳನ್ನು ಗುರುತಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಸದುಪಯೋಗ ಪಡಿಸಿಕೊಂಡು ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಹಾಗೂ ಗ್ರಾಮದ ಸುತ್ತಮುತ್ತಿನಲ್ಲಿ ನಿಂತ ನೀರಿನ್ನು ಸ್ವಚ್ಛಗೊಳಿಸಬೇಕು, ನಿಂತ ಶುದ್ಧ ನೀರನ್ನು ಕಟ್ಟಿ ಕಟ್ಟಿಕೊಂಡು ಸಂಗ್ರಹಿಸಿ ಇಡಬೇಕು.
ಹಾಗೂ ಶುದ್ಧ ಕುಡಿಯುವ ನೀರು ಉಪಯೋಗಿಸುವಂತೆ ಗ್ರಾಮಗಳಲ್ಲಿ ಡಂಗುರ ಸಾರಬೇಕು. ನೀರಿನ ನಿರ್ವಹಣೆ ಕುರಿತು ಗ್ರಾಮ ಪಂಚಾಯಿತಿ ಹಂತದಲ್ಲಿ ವಹಿಗಳನ್ನು ಇಟ್ಟುಕೊಳ್ಳಬೇಕು. ಮೇಲಾಧಿಕಾರಿಗಳು ಭೇಟಿ ನೀಡಿದಾಗ ನಿರ್ವಹಣೆ ಮಾಡಿರುವ ದಾಖಲಾತಿಗಳನ್ನು ತೋರಿಸಬೇಕು. ಜನ ಜಾನುವಾರುಗಳಿಗೆ ಬೇಸಿಗೆ ಸಮಯದಲ್ಲಿ ನೀರಿನ ಸಮಸ್ಯೆ ಆಗದಂತೆ ಎಲ್ಲರೂ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು. ಕಳೆದ 3 ವರ್ಷದಲ್ಲಿ ಇಂಡಿ ಮತ್ತು ಚಡಚಣ ಭಾಗದ ಎಲ್ಲಾ ಅಧಿಕಾರಿಗಳು ಬೇಸಿಗೆ ಸಮಯದಲ್ಲಿ ಅಚ್ಚುಕಟ್ಟಾಗಿ ಕೆಲಸ ನಿಭಾಯಿಸಿದ್ದೀರಿ. ಅದೇ ರೀತಿ ಈ ಬಾರಿ ಮೇಲಾಧಿಕಾರಿಗಳ ಅಗತ್ಯ ಸಲಹೆ , ಸೂಚನೆ , ಮಾರ್ಗದರ್ಶನ ಪ್ರಕಾರ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ತಹಶೀಲ್ದಾರ ಬಿ ಎಸ್ ಕಡಕಬಾವಿ ಮತ್ತು ಚಡಚಣ ಕಾರ್ಯನಿರ್ವಾಹಕ ಅಧಿಕಾರಿಗಳು ಇಂಡಿ ಮತ್ತು ಚಡಚಣ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಇಂಡಿ , ನಗರ ನೀರು ಸರಬರಾಜು ಇಲಾಖೆ ಇಂಡಿ ಇವರು ಉಪಸ್ಥಿರಿದ್ದರು.ಈ ಸಂದರ್ಭದಲ್ಲಿ ಅಧೀಕ್ಷಕರು ಅಭಿಯಂತರು ರಾಂಪೂರ ಆಲಮಟ್ಟಿ ವಿಭಾಗದ ಇಂಜಿನಿಯರುಗಳು ತಾಲ್ಲೂಕಿನ ಎಲ್ಲಾ ವಿಭಾಗದ ಅಧಿಕಾರಿಗಳು, ಇಂಡಿ ಮತ್ತು ಚಡಚಣ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಪಂಚಾಯತ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 