ಜ್ಞಾನ ವಿಕಾಸ ಯೋಜನೆ ಗ್ರಾಮೀಣ ಮಹಿಳೆಯರ ಪಾಲಿಗೆ ವರವಾಗಿದೆ :ಶಾಸಕ ನಾಯಕ್
Gyan Vikas Yojana is a boon for rural women: MLA Nayak
ಶಿಗ್ಗಾವಿ 10: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಯೋಜನೆ ಗ್ರಾಮೀಣ ಮಹಿಳೆಯರ ಪಾಲಿಗೆ ವರವಾಗಿದೆ ಎಂದು ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶೇಖರ್ ನಾಯಕ್ ಹೇಳಿದರು. ತಾಲೂಕಿನ ಹುಲಗೂರ ವಲಯದ ಶಿಶುವಿನಾಳ ಕಾರ್ಯಕ್ಷೇತ್ರದ ದಾರಿ ದೀಪ ಜ್ಞಾನವಿಕಾಸದ ಕೇಂದ್ರದಲ್ಲಿ ಗುರುವಾರ ನಡೆದ ಸೃಜನ ಶೀಲ ಕಾರ್ಯಕ್ರಮದಡಿಯಲ್ಲಿ ಕೃತಕ ಆಭರಣಗಳ ತಯಾರಿಕೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅದನ್ನು ಸಂಪೂರ್ಣ ಯಶಸ್ವಿಗೊಳಿಸಲು ಸಾಧ್ಯವಾಗದಿರುವದನ್ನು ಗಮನಿಸಿದ ಡಾ.ಹೆಗ್ಗಡೆಯವರು ಹಾಗೂ ಹೆಗ್ಗಡೆಯವರ ಧರ್ಮ ಪತ್ನಿ ಹೇಮಾವತಿ ಅಮ್ಮನವರು ದಾರಿ ದೀಪ ಜ್ಞಾನವಿಕಾಸ ಯೋಜನೆ ಜಾರಿಗೆ ತಂದಿದ್ದಾರೆ. ಪ್ರತಿ ತಿಂಗಳಿಗೊಮ್ಮೆ ನಡೆಯುವ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸ್ವಾವಲಂಬಿ ಬದುಕಿನ ನಿರ್ವಹಣೆಯ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕ ನಿರಂಜನ್ ಸಿ ಎಸ್, ಜ್ಞಾನ ವಿಕಾಸ ಸಮನ್ವಯಧಿಕಾರಿ ಶಿವಲೀಲಾ, ಸ್ಥಳೀಯ ಸೇವಾ ಪ್ರತಿನಿಧಿ ರೇಖಾ ಸ್ವಸಾಯ ಸಂಘದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 