ದೇವಾಲಯ ಕಟ್ಟಡ ನಿರ್ಮಾಣಕ್ಕೆ ಎಚ್.ಡಿ.ಕುಮಾರಸ್ವಾಮಿ ದೇಣಿಗೆ
HD Kumaraswamy donation for construction of temple building
ಗದಗ 09 : ಜಿಲ್ಲೆಯ ಶಿರಹಟ್ಟಿ ತಾಲೂಕಿನ ಅಂಕಲಿಯಲ್ಲಿ ಆರಾಧ್ಯ ದೇವತೆ ಮರಿಯಮ್ಮ ದೇವಿಯ ನೂತನ ದೇವಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಮರಿಯಮ್ಮ ದೇವಸ್ಥಾನ ಟ್ರಸ್ಟ್ ನಿಯೋಗ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಭೇಟಿಮಾಡಿ ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಸಲ್ಲಿಸಿತು. ನಿಯೋಗದ ಮನವಿಗೆ ತಕ್ಷಣ ಸ್ಪಂದಿಸಿದ ಎಚ್.ಡಿ.ಕುಮಾರಸ್ವಾಮಿ ತಮ್ಮ ಆಪ್ತ ಸಹಾಯಕ ಗಂಗಾಧರ್ ಹೊಂಬಾಳೆಮಠ ಮುಖಾಂತರ ದೇವಸ್ಥಾನ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿಯನ್ನು ಚೆಕ್ಕ್ ಮೂಲಕ ದೇಣಿಯಾಗಿ ನೀಡಿದ್ದಾರೆ.ಈ ಸಂದರ್ಭದಲ್ಲಿ ಅಂಕಲಿ ಗ್ರಾಮದ ಹಿರಿಯರಾದ ಫಕ್ಕಿರೆಡ್ಡಿ ಗೋಡಪಟ್ಟಿ ಬಾಬುರೆಡ್ಡಿ ದೋನ್ನೂರು ಹಾಲೇಶ ಪ್ರಚಾರ ಶಂಭು ಹಿರೇಮಠ ನಿಂಗಪ್ಪ ಹಿರಿಜನ ಸುರೇಶ ಮೇಲ್ಮನಿ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 