ಗೃಹ ಜ್ಯೋತಿ ಪರೀಶೀಲನಾ ಅಭಿಯಾನಕ್ಕೆ ಹೆಸ್ಕಾಂ ಅಧ್ಯಕ್ಷ ಅಜಿಂಪೀರ್ ಖಾದ್ರಿ ಚಾಲನೆ
HESCOM Chairman Ajimpeer Khadri launches the Gruha Jyothi verification drive
ಶಿಗ್ಗಾವಿ 03: ಸಾರ್ವಜನಿಕರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯನ್ನು ತಳಮಟ್ಟದಲ್ಲಿ ಇನ್ನಷ್ಟು ಗಟ್ಟಿಗೊಳಿಸಲು ಹೆಸ್ಕಾಂ ಇಲಾಖೆ ಮುಂದಾಗಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜೀಂಪೀರ ಎಸ್. ಖಾದ್ರಿ ಅವರು ಹೇಳಿದರು.
ಪಟ್ಟಣದ ಮೌಲಾಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಮನೆ-ಮನೆ ಪರೀಶೀಲನಾ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಅವರು. ಗೃಹ ಜ್ಯೋತಿಯ ಯೋಜನೆಯ ಲಾಭವು ಕ್ಷೇತ್ರದ ಪ್ರತಿಯೊಬ್ಬ ನೈಜ ಅರ್ಹ ಗ್ರಾಹಕನಿಗೂ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಪರೀಶೀಲನೆ ಮಾಡಲಾಗುತ್ತಿದೆ.
ಇದು ಕೇವಲ ಉಚಿತ ವಿದ್ಯುತ್ ನೀಡುವ ಕಾರ್ಯಕ್ರಮವಲ್ಲ, ಬದಲಿಗೆ ಪ್ರತಿ ಮನೆಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಮೂಲಕ ಜನರ ಜೀವನಮಟ್ಟವನ್ನು ಸುಧಾರಿಸುವ ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆಯಾಗಿದೆ.
ಯೋಜನೆಯ ಯಶಸ್ವಿ ಅನುಷ್ಠಾನದ ನಡುವೆಯೂ ತಾಂತ್ರಿಕ ಕಾರಣಗಳಿಂದ ಕೆಲವು ಗ್ರಾಹಕರಿಗೆ ಉಂಟಾಗುತ್ತಿರುವ ಗೊಂದಲಗಳನ್ನು ಪರಿಹರಿಸಲು ಈ ಪರೀಶೀಲನೆ ಅತ್ಯಗತ್ಯವಾಗಿದೆ. ಯೋಜನೆಗೆ ಒಳಪಡದ ನೈಜ ಫಲಾನುಭವಿಗಳನ್ನು ಗುರುತಿಸಿ ಯೋಜನೆಗೆ ಸೇರಿಸಲಾಗುತ್ತದೆ. ಅನರ್ಹ ಫಲಾನುಭವಿಗಳನ್ನು ಯೋಜನೆಯಿಂದ ಹೊರತೆಗೆಯಲಾಗುತ್ತದೆ. ತಳಮಟ್ಟದಲ್ಲಿ ಉಂಟಾಗುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯು ನಿರಂತರವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳುವುದು ಎಂದು ಅವರು ಹೇಳಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 